ಮೊನ್ನೆ ನಾಯಿ ಮೇಲೆ ಅತ್ಯಾಚಾರ, ನಿನ್ನೆ ಭಿಕ್ಷುಕಿ ಮೇಲೆ ಕಾಮುಕರ ಅಟ್ಟಹಾಸ

dog and begger rape case
Published on

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದೆ. ಮೊನ್ನೆ ಹೆಣ್ಣುನಾಯಿ ಮೇಲೆ ಅತ್ಯಾಚಾರ ನಡೆದಿತ್ತು. ಇದಾದ ಮುರುದಿನವೇ ಭಿಕ್ಷುಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಕಾಮುಕರ ಪೈಶಾಚಿಕ ಕೃತ್ಯಕ್ಕೆ ನಿರ್ಗತಿಕ ಮಹಿಳೆ ಬಲಿಯಾಗಿದ್ದಾಳೆ.

ಮೈಸೂರಿನ ಕೆ.ಟಿ‌.ಸ್ಟ್ರೀಟ್​ನಲ್ಲಿ ಬಾರ್ ಮುಂದೆ ಮಲಗಿದ್ದ ನಿರ್ಗತಿಕ ಮಹಿಳೆ ಕೊಲೆಯಾಗಿದ್ದು, ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಫೆ.16ರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಕಾಮುಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸ್ಥಳಕ್ಕೆ ಡಿಸಿಪಿ ಪ್ರಕಾಶ್ ಗೌಡ, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರೀಶಿಲನೆ ನಡೆಸಿದೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮರಾಗಳ ದೃಶ್ಯಾವಳಿಯನ್ನು ಪರೀಶೀಲನೆ ಮಾಡಿ ತನಿಖೆ ಮುಂದುವರಿಸಿದ್ದಾರೆ. ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ‌ ವಿ.ವಿ.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಮುಕನೊಬ್ಬ ಕಾಮತೃಷೆಗಾಗಿ ನಾಯಿ ಮೇಲೂ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದ. ನಾಯಿ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಸೋಮಶೇಖರ್​ನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net