More

    ಸಂಸ್ಥೆಗಳ ನೋಂದಣಿಗೆ ಅರ್ಜಿ ಆಹ್ವಾನ

    ಬೆಳಗಾವಿ: ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ, ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯುವ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 3,4 ಮತ್ತು 5ರ ಅಡಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯ.

    ಜಿಲ್ಲೆಯಲ್ಲಿ ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ, ಸಂಸ್ಥೆಗಳು ಭರ್ತಿ ಮಾಡಿದ ಅರ್ಜಿಯಲ್ಲಿ ಅಗತ್ಯ ದಾಖಲಾತಿಗಳು ಹಾಗೂ ನಿಗದಿಪಡಿಸಿದ ಶುಲ್ಕದೊಂದಿಗೆ ನೋಂದಣಿ ಕೋರಿ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ 30 ದಿನಗಳೊಳಗಾಗಿ ಅರ್ಜಿ ಸಲ್ಲಿಸಬೇಕು.

    ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ www.ahvs.kar.nic.in ಮೊ. 9448661566 ಅಥವಾ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರ ದೂ. 0831-2407297 ಅಥವಾ 9448276232 ಸಂಪರ್ಕಿಸಬಹದು ಎಂದು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts