More

    ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್​: ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ 50 ರೂ. ಹೆಚ್ಚಳ

    ನವದೆಹಲಿ: ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಗಲೇ ಮತ್ತೊಂದು ಬರೆ ಬಿದ್ದಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್​ ಬೆಲೆಯಲ್ಲಿ ಇಂದು 50 ರೂಪಾಯಿ ಹೆಚ್ಚಳವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 14.2 ಕೆಜಿ ತೂಕದ ಸಿಲಿಂಡರ್​ ಬೆಲೆ 1103 ರೂ.ಗೆ ಏರಿಕೆಯಾಗಿದೆ.

    ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ಬೆಲೆಯಲ್ಲೂ 350.50 ರೂಪಾಯಿ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಈ ಹಿಂದೆ 1053 ರೂ. ಇದ್ದ ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇದೀಗ 1103 ರೂ. ಆಗಿದೆ. ಮುಂಬೈನಲ್ಲಿ 1052.50ಕ್ಕೆ ಬದಲಾಗಿ 1102.5 ರೂ., ಕೊಲ್ಕತದಲ್ಲಿ 1079 ರೂ.ಗೆ ಬದಲಾಗಿ 1129 ರೂ., ಚೆನ್ನೈನಲ್ಲಿ 1068.50 ಕ್ಕೆ ಬದಲಾಗಿ 1118.5 ರೂ.ಗೆ ಏರಿಕೆಯಾಗಿದೆ.

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್​ ದರ 1105.50 ರೂಪಾಯಿಗೆ ಏರಿಕೆಯಾಗಿದೆ.

    ಇದನ್ನೂ ಓದಿ: ಕೈಲಾಸಕ್ಕೆ ವಿಶ್ವಸಂಸ್ಥೆ ಮಾನ್ಯತೆ ಸಿಕ್ಕಿತೆಂದು ಕತೆ ಕಟ್ಟಿದ ನಿತ್ಯಾನಂದ- ಅಸಲಿ ಕಥೆ ಏನು ಗೊತ್ತಾ?

    ಈ ವರ್ಷದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇದು ಎರಡನೇ ಏರಿಕೆಯಾಗಿದೆ. ಇದಕ್ಕೂ ಮುನ್ನ ಜನವರಿ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್‌ಗೆ 25 ರೂ. ಹೆಚ್ಚಿಸಲಾಗಿತ್ತು.

    ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್, ದೆಹಲಿಯಲ್ಲಿ ರೂ.1769 ಬದಲಿಗೆ ರೂ.2119.5ಕ್ಕೆ ಲಭ್ಯವಿರುತ್ತದೆ. ಕೋಲ್ಕತ್ತಾದಲ್ಲಿ 1870 ರೂ. ಇದ್ದದ್ದು ಈಗ 2221.5 ರೂ. ಆಗಿದೆ. ಮುಂಬೈನಲ್ಲಿ ಇದರ ಬೆಲೆ ಈಗ 1721 ರಿಂದ 2071.50 ರೂ.ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1917 ರೂ.ಗೆ ಸಿಗುತ್ತಿದ್ದ ಸಿಲಿಂಡರ್ ಈಗ 2268 ರೂ.ಗೆ ದೊರೆಯಲಿದೆ. (ಏಜೆನ್ಸೀಸ್​)

    ವಿವಾಹೇತರ ಸಂಬಂಧ: ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪತಿಯನ್ನು ರಸ್ತೆಯಲ್ಲಿ ಎಳೆದಾಡಿ ಥಳಿಸಿದ ಪತ್ನಿ

    ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ; ಏ.1ರಿಂದ ಮಧ್ಯಂತರ ಆದೇಶ ಅನ್ವಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts