ರಷ್ಯಾ ಜತೆಗಿನ ವ್ಯಾಪಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದ ಅಮೆರಿಕ ಅಧ್ಯಕ್ಷ ​|Donald Trump

Trump reacts to India
Published on

Donald Trump: ಅಮೆರಿಕವು ರಷ್ಯಾದ ರಾಸಾಯನಿಕಗಳು ಮತ್ತು ರಸಗೊಬ್ಬರಗಳನ್ನು ಆಮದು ಮಾಡಿಕೊಳ್ಳುತ್ತದೆ ಎಂಬ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಷ್ಯಾದಿಂದ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಆಮದಿನ ಬಗ್ಗೆ ಪ್ರಶ್ನಿಸಿದಾಗ, ನನಗೆ ಅದರ ಬಗ್ಗೆ ಏನೂ ತಿಳಿದಿಲ್ಲ. ನಾವು ಇದರ ಬಗ್ಗೆ ಪರಿಶೀಲಿಸಬೇಕಾಗುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಅಮೆರಿಕವು ತನ್ನ ಪರಮಾಣು ಉದ್ಯಮ, ರಸಗೊಬ್ಬರಗಳು ಮತ್ತು ರಾಸಾಯನಿಕಗಳಿಗಾಗಿ ರಷ್ಯಾದಿಂದ ಯುರೇನಿಯಂ ಹೆಕ್ಸಾಫ್ಲೋರೈಡ್ ಅನ್ನು ಆಮದು ಮಾಡಿಕೊಳ್ಳುವುದನ್ನು ಮುಂದುವರೆಸಿದೆ ಎಂದು ಭಾರತ ಹೇಳಿದ ನಂತರ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಟ್ರಂಪ್​ಗೆ ತಿರುಗೇಟು ನೀಡಿದ ಭಾರತ

ಟ್ರಂಪ್ ಸುಂಕ ಕ್ರಮಕ್ಕೆ ತಿರುಗೇಟು ನೀಡಿದ ಭಾರತ, ರಷ್ಯಾದಿಂದ ಅಮೆರಿಕ ಆಮದು ಮಾಡಿಕೊಳ್ಳುತ್ತಿರುವುದನ್ನು ಎತ್ತಿ ತೋರಿಸಿದೆ. ಅಮೆರಿಕಕ್ಕೆ ಸಂಬಂಧಿಸಿದಂತೆ, ಯುಎಸ್​ ತನ್ನ ಪರಮಾಣು ಉದ್ಯಮಕ್ಕೆ ಯುರೇನಿಯಂ ಹೆಕ್ಸಾಫ್ಲೋರೈಡ್, ತನ್ನ ಇವಿ ಉದ್ಯಮಕ್ಕೆ ಪಲ್ಲಾಡಿಯಮ್, ರಸಗೊಬ್ಬರಗಳು ಮತ್ತು ರಾಸಾಯನಿಕಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುವುದನ್ನು ಮುಂದುವರೆಸಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಟ್ರಂಪ್ ಭಾರತವನ್ನು ಗುರಿಯಾಗಿಸಿಕೊಂಡಿರುವುದನ್ನು ಅಸಮರ್ಥನೀಯ ಎಂದು ಭಾರತ ಪ್ರತಿಕ್ರಿಯಿಸಿದೆ. ಭಾರತ ಸರ್ಕಾರ ತನ್ನ ರಾಷ್ಟ್ರೀಯ ಹಿತಾಸಕ್ತಿ ಮತ್ತು ಆರ್ಥಿಕ ಭದ್ರತೆಯನ್ನು ಕಾಪಾಡುತ್ತದೆ ಎಂದು ತಿಳಿಸಿದೆ.

ಭಾರತದ ವಿರುದ್ಧ ಟ್ರಂಪ್ ತಮ್ಮ ಟೀಕೆಗಳನ್ನು ಮುಂದುವರೆಸುತ್ತಾ, ಸುಂಕಗಳನ್ನು ಹೆಚ್ಚಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೆ, ರಷ್ಯಾದೊಂದಿಗೆ ವ್ಯವಹಾರ ಮಾಡುವ ಮೂಲಕ ದೇಶವು ಯುದ್ಧ ಯಂತ್ರಕ್ಕೆ ಇಂಧನ ಸುರಿಯುತ್ತಿದ್ದಾರೆ ಎಂದು ರಿಪಬ್ಲಿಕನ್ ಪಕ್ಷದ ನಾಯಕಿ ಭಾರತೀಯ-ಅಮೆರಿಕನ್ ನಿಕ್ಕಿ ಹ್ಯಾಲಿ ಭಾರತವನ್ನು ಬೆಂಬಲಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net