

ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪೂರಕವಾಗಿ ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ವತಿಯಿಂದ ಮಂಗಳವಾರ ಶಿಲಾಸೇವೆಯ ದೇಣಿಗೆ ಸಮರ್ಪಿಸಲಾಯಿತು.
ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ನವದುರ್ಗಾ ಲೇಖನ ಯಜ್ಞದ ಬಗ್ಗೆ ಮಾಹಿತಿ ನೀಡಿದರು.
ದಕ್ಷಿಣ ಕನ್ನಡ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಪರ್ಸಿನ್ ಮೀನುಗಾರರ ಸಂಘ ಅಧ್ಯಕ್ಷ ನಾಗರಾಜ್ ಸುವರ್ಣ ಮತ್ತು ಪದಾಧಿಕಾರಿಗಳು, ಪರ್ಸಿನ್ ಬೋಟ್ ಮಾಲೀಕರು, ಮಾರಿಗುಡಿ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯದರ್ಶಿ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಮೋಹನ್ ಬಂಗೇರ, ಮಧುಕರ್ ಎಸ್. ಉಪಸ್ಥಿತರಿದ್ದರು.