ಗ್ರಾಮೀಣ ಶಾಲೆ ಉಳಿಸಲು ದಾನಿಗಳ ಕೊಡುಗೆ ಮಹತ್ವ

sid-4
Published on

ವಿಜಯವಾಣಿ ಸುದ್ದಿಜಾಲ ಆರ್ಡಿ

ಗ್ರಾಮೀಣ ಭಾಗದ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ದಾನಿಗಳು, ವಿದ್ಯಾಭಿಮಾನಿಗಳು, ಸಂಘ ಸಂಸ್ಥೆಗಳು, ಹಳೇ ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಮಹತ್ವದ್ದು ಎಂದು ಅರಸಮ್ಮಕಾನು ಶ್ರೀನಾಗಕನ್ನಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮೊಕ್ತೇಸರ ಚಂದ್ರಶೇಖರ ಶೆಟ್ಟಿ ಮೂಡುಬೈಲ್ ಹೇಳಿದರು.

ಗಂಟುಬೀಳು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಳ್ವೆ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿದ ಆವರಣ ಗೋಡೆಗೆ ಕೊಡುಗೆಯಾಗಿ ನೀಡಿದ ನೂತನ ಗೇಟ್‌ನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.

ಕೋಟೇಶ್ವರ ಗೀತಾ ಎಚ್.ಎಸ್.ಎನ್.ಫೌಂಡೇಶನ್ ಅಧ್ಯಕ್ಷ ಶಂಕರ ಐತಾಳ್ ಅಮಾಸೆಬೈಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದರು. ಆರ್ಡಿ ಅಲ್ಬಾಡಿ ಕ್ಲಸ್ಟರ್ ಸಿ.ಆರ್.ಪಿ ಅನೂಪ್ ಕುಮಾರ್ ಶೆಟ್ಟಿ ಶಾಲಾ ಮಕ್ಕಳ ಇಂಚರ ಹಸ್ತಪತ್ರಿಕೆ ಬಿಡುಗಡೆಗೊಳಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮ ನಡೆಯಿತು.

ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಬಿ.ಕಿಶನ್‌ರಾಜ್ ಶೆಟ್ಟಿ ಬೆಳ್ವೆ, ಎಸ್.ಡಿ.ಎಂ.ಸಿ ಅಧ್ಯಕ್ಷ ರಂಜಿತ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾರದಾ ಸ್ವಾಗತಿಸಿದರು. ಜ್ಞಾನದೀಪ ಶಿಕ್ಷಕಿ ಅಶ್ವಿನಿ ವಂದಿಸಿದರು. ಸಹ ಶಿಕ್ಷಕ ದಿನೇಶ್ ಆಚಾರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net