More

    ನ್ಯಾಯಾಲಯದ ಆದೇಶ ಮೀರಿ ವರ್ತಿಸದಿರಿ : ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ ಎಚ್ಚರಿಕೆ

    ಸಿಂದಗಿ : ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವ ಮಂಡಳಿಗಳು ವಿವಿಧ ಇಲಾಖೆಗಳ ಅನುಮತಿಗಾಗಿ ತೆರೆದ ಏಕಗವಾಕ್ಷಿ ಸೇವೆಯನ್ನು ಕಲ್ಪಿಸಲಾಗಿದ್ದು, ಅದನ್ನು ಬಳಸಿಕೊಳ್ಳಬೇಕು ಎಂದು ಇಂಡಿ ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ ಹೇಳಿದರು.

    ಪಟ್ಟಣದಲ್ಲಿ ಶನಿವಾರ ಸಂಜೆ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯನ್ನುದ್ದೇಶಿಸಿ ಮಾತನಾಡಿ, ಆಚರಣೆ ಸ್ಥಳದ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಮಂಡಳಿಯವರೇ ನೋಡಿಕೊಳ್ಳಬೇಕು. ಪೆಂಡಾಲ್‌ಗಳಲ್ಲಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಬಳಸಬೇಕು. ಕಡ್ಡಾಯವಾಗಿ ಪ್ರತಿ ಮಂಡಳಿಗಳು ಸಂಬಂಧಿಸಿದ ಇಲಾಖೆಗಳ ಪರವಾನಗಿ ಪಡೆಯಬೇಕು. ಹಬ್ಬದ ಕುರಿತು ನ್ಯಾಯಾಲಯ ನೀಡಿರುವ ಆದೇಶ ಮೀರಿ ವರ್ತಿಸದಂತೆ ಎಚ್ಚರಿಕೆ ನೀಡಿದರು.

    ಆಲಮೇಲದಲ್ಲಿ ಗಣೇಶ ಹಬ್ಬ ಆಚರಿಸುವಂತೆ ನೀವುಗಳು ಕೂಡ ಇತರರಿಗೆ ಮಾದರಿಯಾಗುವಂತೆ ವ್ಯವಸ್ಥಿತವಾಗಿ ರೂಪಿಸಿಕೊಳ್ಳಿರಿ. ಪಟ್ಟಣದಲ್ಲಿ ಹಾಳಾದ ಸಿಸಿ ಕ್ಯಾಮರಾ ವ್ಯವಸ್ಥೆಗೆ ಖುದ್ದಾಗಿ ಪ್ರಮುಖ ವೃತ್ತಗಳಲ್ಲಿ ಹೊಸ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

    ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ ಮಾತನಾಡಿ, ಕೋವಿಡ್ ಪಾಲನೆ ಜತೆಗೆ ಕೋಮು ಭಾವನೆಗೆ ಧಕ್ಕೆಯಾಗದಂತೆ ಜಾಗೃತರಾಗಿ ಗಣೇಶ ಹಬ್ಬ ಆರಚಿಸಿರಿ. ನ್ಯಾಯಾಲಯ, ಸರ್ಕಾರ ಮತ್ತು ಜಿಲ್ಲಾಡಳಿತ ನೀಡಿರುವ ಸೂಚನನೆಗಳನ್ನು ಕಡ್ಡಾಯವಾಗಿ ಪಾಲಿಸಿರಿ ಎಂದರು.

    ತಹಶೀಲ್ದಾರ ನಿಂಗಣ್ಣ ಬಿರಾದಾರ ಮಾತನಾಡಿ, ಜಿಲ್ಲಾಧಿಕಾರಿಗಳು ಪಟ್ಟಣದ ತೋಂಟದ ಡಾ. ಸಿದ್ಧಲಿಂಗ ಮಹಾಸ್ವಾಮಿಗಳ ರಸ್ತೆ ಮಾರ್ಗದಲ್ಲಿ ಗಣೇಶೋತ್ಸವದ ಮೆರವಣಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಗಜಾನನ ಮಂಡಳಿಯವರು ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಬಾರದು ಎಂದು ತಿಳಿಸಿದರು.

    ಸಿಪಿಐ ರವಿ ವಕ್ಕುಂದ ಹಾಗೂ ಇಲಾಖಾ ಅಧಿಕಾರಿಗಳು ಮತ್ತು ವಿವಿಧ ಗಜಾನನ ಮಂಡಳಿ ಸೇರಿದಂತೆ ಸಮಾಜದ ಮುಖಂಡರುಗಳು ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ವೇದಿಕೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ರಾಜೇಶ್ವರಿ ತುಂಗಳ, ಅಗ್ನಿಶಾಮಕದಳದ ಶಿವಕುಮಾರ ಬಾಗೇವಾಡಿ, ಠಾಣಾಧಿಕಾರಿ ನಿಂಗಪ್ಪ ಪೂಜಾರಿ ಸೇರಿದಂತೆ ತಾ.ಪಂ. ಮತ್ತು ವಿದ್ಯುತ್ ಇಲಾಖೆಯ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts