

ಪಿರಿಯಾಪಟ್ಟಣ: ಸಾರ್ವಜನಿಕರು ಡೆಂೆ ಜ್ವರದ ಬಗ್ಗೆ ನಿರ್ಲಕ್ಷತನ ತೋರದೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಕಂಪಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಸನ್ನ ಕುಮಾರ್ ಹೇಳಿದರು.
ತಾಲೂಕಿನ ಕಂಪಲಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಡೆಂಘೆ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಡೆಂೆ ಒಂದು ವೈರಸ್ ರೀತಿಯ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಈಡಿಸ್ ಈಜಿಪ್ಟ್ ಎಂಬ ಸೊಳ್ಳೆಯ ಮೂಲಕ ಹರಡುತ್ತದೆ, ನಿಂತ ನೀರಿನಲ್ಲಿ ಬೆಳವಣಿಗೆಯಾಗುತ್ತದೆ. ಈ ಕಾಯಿಲೆಯಲ್ಲಿ ಜ್ವರ, ಕಣ್ಣು ಗುಡ್ಡೆ ಹಿಂಭಾಗದಲ್ಲಿ ವಿಪರೀತವಾದ ನೋವು, ವಸಡಿನಲ್ಲಿ ರಕ್ತಸ್ರಾವ, ಚರ್ಮದ ಮೇಲೆ ಕೆಂಪನೆಯ ಮಚ್ಚೆಗಳು, ವಾಕರಿಕೆ, ಸುಸ್ತು, ಮೈಕೈ ನೋವು, ರಕ್ತದಲ್ಲಿ ಪ್ಲೇಟ್ಲೆಟ್ಸ್ ಕಡಿಮೆಯಾಗುವುದು. ಡೆಂೆ ರೋಗದ ಲಕ್ಷಣಗಳಾಗಿವೆ ಎಂದರು.
ಡೆಂೆ ತಡೆಗಾಗಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಮನೆಯಲ್ಲಿ ನೀರು ಸಂಗ್ರಹಿಸಲು ಇಟ್ಟಿರುವ ತೊಟ್ಟಿ ಡ್ರಮ್ಗಳನ್ನು ವಾರಕ್ಕೆ ಎರಡು ಬಾರಿ ಸ್ವಚ್ಛಪಡಿಸುವುದು ಮತ್ತು ಮುಚ್ಚಿಟ್ಟು ಬಳಸುವುದು. ಘನತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡಿ, ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಯಾವುದೇ ಜ್ವರವಿರಲಿ ಹತ್ತಿರದ ಆರೋಗ್ಯ ಕೇಂದ್ರ ಭೇಟಿ ನೀಡಿ ಸೂಕ್ತ ಪರೀಕ್ಷೆ ಹಾಗೂ ಚಿಕಿತ್ಸೆಯನ್ನು ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವನಾಥ್, ಆರೋಗ್ಯ ಸಂರಕ್ಷಣಾಧಿಕಾರಿ ಸುವರ್ಣ, ಕಾಂತಮ್ಮ, ಹೇಮಲತಾ, ರಾಧಾಮಣಿ, ಪೂಜಾ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮಸ್ಥರು ಇದ್ದರು.