ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ​ | DK Shivakumar

blank

ನವದೆಹಲಿ: ಇಂದು (ಜ.06) ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)​, “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ: ಸಾರಿಗೆ ನೌಕರರಿಗೆ ದಶಕದ ಬೇಡಿಕೆ ಈಡೇರಿದ ಸಂತೃಪ್ತಿ: ಸಿಎಂ ಸಿದ್ದರಾಮಯ್ಯ | Cashless medical facility for KSRTC employees

ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು.

ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಕೇಳಿದಾಗ, “ಅನೇಕ ಮಂತ್ರಿಗಳು ಸಹ ಕುಟುಂಬದವರ ಜತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?”  ಎಂದರು.

ಇದನ್ನೂ ಓದಿ: ಬಸ್ ದರ ಏರಿಕೆ-ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ, ಬಿಜೆಪಿಯಿಂದ ರಾಜ್ಯಪಾಲರಿಗೆ ಮನವಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂದಾಗ, “ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ” ಎಂದು ಹೇಳಿದರು.

ಈ 9 ಆಹಾರಗಳನ್ನು ತಿಂದರೆ HMPV ವೈರಸ್​ ನಿಮ್ಮ ಬಳಿ ಸುಳಿಯುವುದೇ ಇಲ್ಲ! ಇಲ್ಲಿದೆ ಉಪಯುಕ್ತ ಮಾಹಿತಿ…

Share This Article

ಚುಮು ಚುಮು ಚಳಿಗೆ ಮನೆಯಲ್ಲೇ ಮಾಡಿ Ragi ಪಕೋಡ; ನಾಲಿಗೆಗೂ ರುಚಿಕರ ಆರೋಗ್ಯಕ್ಕೂ ಒಳ್ಳೆಯದು

ಬೆಂಗಳೂರು: ಪ್ರಸ್ತುತ ಜೀವನಶೈಲಿಯನ್ನು ನೋಡುವುದಾದರೆ ಜನರು ತಾವು ಸೇವಿಸುವ ಆಹಾರದಿಂದಲೇ ಅನಾರೋಗ್ಯಕ್ಕೀಡಾಗುತ್ತಿರುವುದು ನಿಜಕ್ಕೂ ಕಳವಳಕಾರಿಯಾಗಿದೆ. ಇಂತಹ…

valentines day: ಪ್ರೇಮಿಗಳ ದಿನದಂದು ನಿಮ್ಮ ಮುಖ ಲಕ-ಲಕ ಹೊಳೆಯಲು ಒಮ್ಮೆ ಟ್ರೈ ಮಾಡಿ..

valentines day : ಪ್ರೇಮಿಗಳ ದಿನದಂದು, ಬಹುತೇಕ ಎಲ್ಲಾ ಹುಡುಗಿಯರು ತಮ್ಮ ಸಂಗಾತಿಯ ಮುಂದೆ ಅತ್ಯಂತ…

ಟೇಸ್ಟಿ ಹೆಸರುಕಾಳಿನ ಕಬಾಬ್​ ಮಾಡಲು 15-20 ನಿಮಿಷ ಸಾಕು; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ವಾರಾಂತ್ಯದಲ್ಲಿ ಏನಾದರೂ ವಿಶೇಷವಾಗಿ ತಿಂಡಿ ತಯಾರಿಸಬೇಕು ಆದರೆ ಏನು ಮಾಡೋದು.. ಅತಿಥಿಗಳು ಬಂದಾಗ ಥಟ್​ ಅಂಥಾ…