More

    ಸಿಎಂ ಕುರ್ಚಿ ಹೋದ್ರೂ ಚಿಂತೆ ಇಲ್ಲ, ಅಂಟಿಕೊಂಡು ಕುಳಿತಿಲ್ಲ – ಬಿಹಾರ ಸಿಎಂ ನಿತೀಶ್ ಕುಮಾರ್ ಗರಂ

    ಪಟನಾ: ಸಂಯುಕ್ತ ಜನತಾದಳ (ಜೆಡಿಯು)ದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆಯನ್ನು ಆಪ್ತ ರಾಮಚಂದ್ರ ಪ್ರಸಾದ್ ಸಿಂಗ್ ಅವರಿಗೆ ಹಸ್ತಾಂತರಿಸಿದ ಬೆನ್ನಿಗೇ ಮುಖ್ಯಮಂತ್ರಿ ನಿತೀಶ್ ಕುಮಾರ್​, ಸಿಎಂ ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ಅದು ಹೋದರೂ ಚಿಂತೆ ಇಲ್ಲ ಎಂದು ಬಾಂಬ್ ಸಿಡಿಸಿದ್ದಾರೆ. ಜೆಡಿಯುನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಈ ಮಾತುಗಳನ್ನು ಅವರು ಹೇಳಿದ್ದಾರೆ.

    ಅವರ ಹೇಳಿಕೆ ಹೀಗಿತ್ತು – ಚುನಾವಣಾ ಫಲಿತಾಂಶ ಬಂದ ಕೂಡಲೇ ಮಿತ್ರ ಪಕ್ಷದವರಿಗೆ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ಆದಾಗ್ಯೂ, ಅವರ ಒತ್ತಡ ಹೇರಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವಂತೆ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಬಿಜೆಪಿ ಬಯಸಿದೆ ಎಂದು ಜನ ಹೇಳುತ್ತಿದ್ದಾರೆ. ಇದನ್ನೆಲ್ಲ ನಾನು ಕೇರ್ ಮಾಡಲ್ಲ. ನಾನೇನೂ ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ಮುಖ್ಯಮಂತ್ರಿ ಸ್ಥಾನ ಹೋದರೂ ಚಿಂತೆ ಇಲ್ಲ.

    ಇದನ್ನೂ ಓದಿ: ಅರುಣಾಚಲದಲ್ಲಿ ಜೆಡಿಯುಗೆ ಆಘಾತ: ಬಿಜೆಪಿ ಸೇರಿದ್ರು ಆರು ಶಾಸಕರು

    ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಆರು ಶಾಸಕರು ಬಿಜೆಪಿ ಸೇರಿದ ಬೆನ್ನಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮೇಲಿನ ಒತ್ತಡ ಹೆಚ್ಚಾಗಿತ್ತು. ಎನ್​ಡಿಎ ಮಿತ್ರಪಕ್ಷಗಳ ನಡುವೆ ಆಂತರಿಕ ಸಂಘರ್ಷ ಏರ್ಪಟ್ಟಿದ್ದು, ಇದೇ ಮೊದಲ ಬಾರಿಗೆ ನಿತೀಶ್ ಕುಮಾರ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    ಜೆಡಿಯುಗೆ ಹೊಸ ಸಾರಥಿ- ನಾಯಕತ್ವದಿಂದ ಹಿಂದೆ ಸರಿದ್ರು ನಿತೀಶ್ ಕುಮಾರ್ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts