ಬೇಸಿಗೆ ಕಾಲದಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ: ಜಿಪಂ ಸಿಇಓ ರಾಹುಲ್ ತುಕಾರಂ ಸೂಚನೆ

ರಾಯಚೂರು  ಬೇಸಿಗೆ ಸಮಯದಲ್ಲಿ ಜಿಲ್ಲೆಯಲ್ಲಿ ಕುಡಿವ ನೀರು ಪೂರೈಕೆಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನರ‍್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ೭ ತಾಲೂಕುಗಳ ಒಟ್ಟು ೧೭೯ ಗ್ರಾಮ ಪಂಚಾಯತಿಗಳಲ್ಲಿ ೧೪೩೮ ಜನವಸತಿಗಳಿದ್ದು, ಆ ಪೈಕಿ ೨೯೭ ಗ್ರಾಮಗಳಿಗೆ ಕುಡಿಯುವ ನೀರಿನ ಕೆರೆಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ಕೆರೆಗಳು ತುಂಗಭದ್ರಾ ಕಾಲುವೆ ಮುಖಾಂತರ ಹಾಗೂ ಎನ್‌ಆರ್‌ಬಿಸಿ ಕಾಲುವೆ ಮುಖಾಂತರ ನೀರು ಪಡೆದು ಕೆರೆಗಳನ್ನು ತುಂಬಿಸಲಾಗುತ್ತಿದ್ದು, ಶೇ.೫೦ ಕಡಿಮೆ ತುಂಬಿರುವ ಕೆರೆಗಳ ಮಾಹಿತಿಯನ್ನು ಸಲ್ಲಿಸಲು ಹಾಗೂ ಮುಂಬರುವ ಐಸಿಸಿ ಸಭೆಯ ನರ‍್ಣಯದಂತೆ ಕಾಲಮಿತಿಯೊಳಗೆ ಕೆರೆಗಳನ್ನು ತುಂಬಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಒಟ್ಟು ೨,೫೭೦ ಕೊಳವೆಬಾವಿಗಳ ಮೂಲಕ ಗ್ರಾಮೀಣ ಪ್ರದೇಶಗಳಿಗೆ ನೀರು ಒದಗಿಸಲಾಗುತ್ತಿದೆ.
ಮುಂಬರುವ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ‌ ನೀಡಿದರು.
ಬೇಸಿಗೆ ಸಮಯದಲ್ಲಿ ಅರ‍್ತಜಲಮಟ್ಟ ಕ್ಷೀಣಿಸುವ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ಪಟ್ಟಿ ಮಾಡಿ ಬಾಡಿಗೆ ಪಡೆಯಲು ಅಗತ್ಯ ಕರಾರು ಒಪ್ಪಂದ ಮಾಡಿಕೊಳ್ಳಲು ಸಿದ್ದತೆಮಾಡಿಕೊಳ್ಳಬೇಕು. ಕೆರೆಗಳ ನೀರಿನ ಶೇಖರಣೆ ಕುರಿತು ಮಾಹಿತಿಯನ್ನು ಗ್ರಾಮವಾರು ವರದಿ ಸಲ್ಲಿಸಲು ಸೂಚಿಸಲಾಯಿತು.
ಜಲ ಜೀವನ್ ಮಿಷನ್ ಯೋಜನೆಯಡಿ ಈಗಾಗಲೇ ಜಿಲ್ಲೆಯಲ್ಲಿ ೩೩೬ ಕೊಳವೆ ಬಾವಿಗಳನ್ನು ಕೊರೆಯಲಾಗಿದ್ದು, ಇದರ‌ ಸದುಪಯೋಗವಾಗಬೇಕು ಹಾಗೂ ಅನುಮೋದಿತ ಯೋಜನೆಯಂತೆ ಇನ್ನು ೨೬೫ ಕೊಳವೆ ಬಾವಿಗಳನ್ನು ಆದಷ್ಟು ಬೇಗನೆ ಕೊರೆದು ಗ್ರಾಮಗಳಿಗೆ ನೀರು ಸರಬರಾಜು ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನರ‍್ದೇಶನ ನೀಡಿದರು.
ವಿತರಣಾ ಪೈಪ್ ಲೈನದಲ್ಲಿ ಆಗುವ ಸೋರಿಕೆಯನ್ನು ಗುರುತಿಸಿ ತಕ್ಷಣ ದುರಸ್ತಿಗೊಳಿಸಬೇಕು. ನೀರಿನ ಮೇಲ್ತೊಟ್ಟಿಗಳನ್ನು ಸ್ವಚ್ಚಗೊಳಿಸಿ ನೀರು ಸರಬರಾಜು ಮಾಡಬೇಕು. ಎಲ್ಲಾ ಗ್ರಾಮಗಳಲ್ಲಿ ನಿರಂತರ ಕ್ಲೋರಿನೇಶನ್ ಮಾಡಬೇಕು. ಗ್ರಾಮಗಳಲ್ಲಿ ಎಲ್ಲಾ ವರ‍್ಡಗಳಿಗೆ ನೀರು ಸರಬರಾಜು ಆಗುತ್ತಿರುವ ಕುರಿತು ಖಚಿತ ಪಡಿಸಿಕೊಳ್ಳುವುದು ಹಾಗೂ ಒಂದುವೇಳೆ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಸ್ಪಂದಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿಲಾಯಿತು.
ಇದೇ ಸಂರ‍್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕರ‍್ಯರ‍್ಶಿ ಶಶಿಕಾಂತ್ ಶಿವಪುರೆ, ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಿಯ ಕರ‍್ಯನರ‍್ವಾಹಕ ಅಧಿಕಾರಿಗಳು, ಪಂ.ರಾಜ್ ಮತ್ತು ನರೇಗಾ ಸಹಾಯಕ ನರ‍್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ‍್ಲ್ಯ ಉಪವಿಭಾಗದ ಕರ‍್ಯಾಪಾಲಕ ಅಭಿಯಂತರರು ಇದ್ದರು.

Share This Article

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…