More

  ದಯವಿಟ್ಟು ಈ ರೀತಿ ಮಾಡ್ಬೇಡಿ ತುಂಬಾ ನೋವಾಗಿದೆ! ಕ್ಯಾಮೆರಾ ಮುಂದೆ ನಟಿ ಮೀನಾ ಕಣ್ಣೀರು

  ಚೆನ್ನೈ: ಖ್ಯಾತ ಬಹುಭಾಷಾ ನಟಿ ಹಾಗೂ 90ರ ದಶಕದಲ್ಲಿ ದಕ್ಷಿಣ ಭಾರತದ ಸಿನಿ ರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದ ಮೀನಾ, ಇಂದಿಗೂ ಸಿನಿರಂಗದಲ್ಲಿ ಸಕ್ರಿಯರಾಗಿದ್ದಾರೆ. ಮೀನಾ ಅವರು 90ರ ದಶಕದಲ್ಲಿ ಸಿನಿರಸಿಕರ ಕನಸಿನ ಕನ್ಯೆಯಾಗಿದ್ದರು. ರಜಿನಿಕಾಂತ್​, ಕಮಲ್​ ಹಾಸನ್​ ಹಾಗೂ ಕನ್ನಡದಲ್ಲಿ ವಿಷ್ಣುವರ್ಧನ್​ ಹಾಗೂ ರವಿಚಂದ್ರನ್​ರಂತಹ ಪ್ರಮುಖ ನಟರೊಂದಿಗೆ ನಟಿಸಿದ್ದಾರೆ. ಕೇವಲ ಸಾಂಪ್ರದಾಯಿಕ ಪಾತ್ರಗಳಲ್ಲದೆ ಬೋಲ್ಡ್​ ಪಾತ್ರಗಳಲ್ಲೂ ನಟಿ ಮೀನಾ ನಟಿಸಿದ್ದಾರೆ.

  ವೃತ್ತಿಜೀವನದ ಉತ್ತುಂಗದಲ್ಲಿ ಇರುವಾಗಲೇ ಮೀನಾ ಅವರು ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾದರು. ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ. ಹೀಗಿರುವಾಗ ಮೀನಾ ಬಾಳಲ್ಲಿ ದುರಂತವೊಂದು ಘಟಿಸಿತು. ಅದೇನೆಂದರೆ, 2022ರಲ್ಲಿ ಮೀನಾ ಅವರ ಪತಿ ವಿದ್ಯಾ ಸಾಗರ್ ಅನಾರೋಗ್ಯಕ್ಕೆ ಒಳಗಾಗಿ ನಿಧನರಾದರು. ಸದ್ಯ ಮೀನಾ ಅವರು ತಮ್ಮ ಮಗಳೊಂದಿಗೆ ಏಕಾಂಗಿಯಾಗಿ ಜೀವನ ಸಾಗಿಸುತ್ತಿದ್ದಾರೆ. ಇದರ ನಡುವೆ ಕೆಲವರು ಮೀನಾ ಬಗ್ಗೆ ಹಲವು ಸುಳ್ಳು ಸುದ್ದಿಗಳನ್ನು ಹುಟ್ಟು ಹಾಕುತ್ತಿದ್ದಾರೆ. ಈ ವಿಚಾರವಾಗಿ ಇತ್ತೀಚೆಗಷ್ಟೇ ಮೀನಾ, ಸ್ಟ್ರಾಂಗ್ ವಾರ್ನಿಂಗ್ ನೀಡಿದ್ದಾರೆ.

  ಪತಿ ವಿದ್ಯಾಸಾಗರ್ ನಿಧನರಾದಾಗಿನಿಂದ ಮೀನಾ ಬಗ್ಗೆ ನಾನಾ ಮಾತುಗಳು ಕೇಳಿ ಬರುತ್ತಿವೆ. ಅದರಲ್ಲಿ ಎರಡನೇ ಮದುವೆಯಾಗುತ್ತಾರೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ. ಮೀನಾ ನಾಯಕ ಧನುಷ್ ಜೊತೆ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಗೊತ್ತೇ ಇದೆ. ಈ ಬಗ್ಗೆ ಮೀನಾ ಕೂಡ ಪ್ರತಿಕ್ರಿಯೆ ನೀಡಿದ್ದು, ದಯವಿಟ್ಟು ಇಂತಹ ಸುದ್ದಿ ಹಬ್ಬಿಸಬೇಡಿ, ಇದರಿಂದ ತನಗೆ ಹಾಗೂ ಕುಟುಂಬದವರಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. ಆದರೂ ವದಂತಿಗಳು ಮಾತ್ರ ಇನ್ನೂ ನಿಂತಿಲ್ಲ.

  ಇತ್ತೀಚೆಗೆ ಮಾಧ್ಯಮ ಸಂದರ್ಶನದಲ್ಲಿ ಭಾಗವಹಿಸಿದ ಮೀನಾ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ವದಂತಿಗಳನ್ನು ಹಬ್ಬಿಸುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕ್ಕಾಗಿ ಯಾರಾದರೂ ಏನಾದರೂ ಬರೆಯುತ್ತಾರಾ? ನಿಜವಾದ ಸಾಮಾಜಿಕ ಮಾಧ್ಯಮ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಕನಿಷ್ಠ ಸತ್ಯವನ್ನು ತಿಳಿದುಕೊಂಡು ಬರೆಯಿರಿ. ಸತ್ಯಾಂಶ ಅರಿತು ಬರೆದರೆ ಎಲ್ಲರಿಗೂ ಒಳಿತಾಗುತ್ತದೆ. ಯಾಕೆಂದರೆ ದೇಶದಲ್ಲಿ ನನ್ನಂತೆ ಒಂಟಿಯಾಗಿ ಬದುಕುತ್ತಿರುವ ಅನೇಕ ಮಹಿಳೆಯರು ಇದ್ದಾರೆ. ನನ್ನ ಹೆತ್ತವರು ಮತ್ತು ಮಗಳ ಭವಿಷ್ಯದ ಬಗ್ಗೆಯೂ ಯೋಚಿಸಿ. ಸದ್ಯ ನನಗೆ ಎರಡನೇ ಮದುವೆ ಬಗ್ಗೆ ಯಾವುದೇ ಯೋಚನೆ ಇಲ್ಲ. ಭವಿಷ್ಯದಲ್ಲಿ ನಾನು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇನೆ ಎಂದು ನಾನು ಈಗ ಹೇಗೆ ಹೇಳಬಲ್ಲೆ? ಮತ್ತೆ ಮದುವೆಯಾಗುವ ಇರಾದೆ ಇದ್ದರೆ ಖಂಡಿತಾ ಮಾಧ್ಯಮದ ಮುಂದೆ ಹೇಳುತ್ತೇನೆ. ಅಲ್ಲಿಯವರೆಗೂ ಇಂತಹ ವದಂತಿಗಳಿಗೆ ಯಾರೂ ಗಮನ ಕೊಡಬಾರದು ಎಂದರು.

  ಅಂದಹಾಗೆ ಮೀನಾ ಅವರ ಪತಿ ವಿದ್ಯಾಸಾಗರ್​ 2022, ಜೂನ್​ 28ರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ವಿದ್ಯಾಸಾಗರ್ ಅವರು ಬಹು ಅಂಗಾಂಗ ವೈಫಲ್ಯ ಮತ್ತು ದೀರ್ಘಕಾಲದ ಕಾಯಿಲೆಯಿಂದ ಕೊನೆಯುಸಿರೆಳೆದರು. ಮೀನಾ ಮತ್ತು ವಿದ್ಯಾಸಾಗರ್​ ಅವರು 2009ರ ಜುಲೈ 12ರಲ್ಲಿ ಮದುವೆಯಾದರು. ದಂಪತಿಗೆ ನೈನಿಕಾ ಹೆಸರಿನ ಹೆಣ್ಣು ಮಗಳಿದ್ದಾಳೆ. ನೈನಿಕಾ, ಅಟ್ಲೀ ನಿರ್ದೇಶನದ ಥೇರಿ ಸಿನಿಮಾದಲ್ಲಿ ನಟ ವಿಜಯ್​ ಮಗಳಾಗಿ ನಟಿಸಿದ್ದಾಳೆ. (ಏಜೆನ್ಸೀಸ್​)

  ‘ನಿನ್ನ ಗಂಡನನ್ನು ಒಂದು ರಾತ್ರಿ ಕಳಿಸು’!: ಅಭಿಮಾನಿಗೆ ನಟಿ ಜೋತಿಕಾ ಕೊಟ್ಟ ಉತ್ತರ ಹೀಗಿತ್ತು ನೋಡಿ..

  ಭಾರೀ ಬೇಸರ ಹೊರಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್​! ಕಾರಣ ಹೀಗಿದೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts