More

    ನೀವು ಈ ಸಮಸ್ಯೆಯಿಂದ ಬಳಲುತ್ತಿದ್ದರೆ ಕಬ್ಬಿನ ರಸವನ್ನು ಕುಡಿಯಬೇಡಿ…

    ಬೆಂಗಳೂರು: ಕಬ್ಬಿನ ರಸವು ದೇಹವನ್ನು ತಂಪಾಗಿಸುತ್ತದೆ. ದೇಹದಲ್ಲಿ ನೀರಿನಂಶವನ್ನು ಕಾಪಾಡುತ್ತದೆ. ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿಡುತ್ತದೆ. ಈ ಎಲ್ಲಾ ಪ್ರಯೋಜನಗಳ ಹೊರತಾಗಿಯೂ ಎಲ್ಲರೂ ಕಬ್ಬಿನ ರಸವನ್ನು ಹೆಚ್ಚಾಗಿ ಕುಡಿಯಬಾರದು. ಏಕೆಂದರೆ ಕಬ್ಬಿನ ರಸವು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಮಸ್ಯೆಗಳನ್ನು ಉಂಟುಮಾಡಬಹುದು.

    ಸ್ಥೂಲಕಾಯತೆಯಿಂದ ಬಳಲುತ್ತಿರುವವರು ಹಬ್ಬಿನ ಹಾಲಿನಲ್ಲಿ ಹೆಚ್ಚಿನ ಕ್ಯಾಲೋರಿ ಇರುವುದರಿಂದ ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ನೀವು ಖಂಡಿತವಾಗಿಯೂ ಕಬ್ಬಿನ ರಸವನ್ನು ಕುಡಿಯಬಾರದು.

    ಅಜೀರ್ಣದಿಂದ ಬಳಲುತ್ತಿದ್ದರೆ ಕಬ್ಬಿನ ರಸವನ್ನು ಕುಡಿಯಬೇಡಿಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

    ನೀವು ನಿದ್ರಾಹೀನತೆಯಿಂದ ಬಳಲುತ್ತಿದ್ದರೆ ನೀವು ಕಬ್ಬಿನ ರಸವನ್ನು ಕುಡಿಯಬಾರದು. ಇದರಲ್ಲಿರುವ ಪೋಲಿಕೋಸನಾಲ್ ನಿದ್ರೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ನೀವು ನಿದ್ರಾಹೀನತೆ ಮತ್ತು ಒತ್ತಡದ ಸಮಸ್ಯೆಗಳನ್ನು ಎದುರಿಸಬಹುದು.

    ಕಬ್ಬಿನ ರಸದಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. 240 ಮಿಲಿ ಕಬ್ಬಿನ ರಸದಲ್ಲಿ ಸುಮಾರು 50 ಗ್ರಾಂ ಸಕ್ಕರೆ ಇರುತ್ತದೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದರೆ ಕಬ್ಬಿನ ಹಾಲಿನ ಸೇವನೆ ಆದಷ್ಟು ಕಡಿಮೆ ಮಾಡುವುದು ಒಳ್ಳೆಯದಾಗಿದೆ.

    ಗಮನಿಸಿ:  ಮೇಲೆ ನೀಡಿರುವ ಮಾಹಿತಿಯನ್ನು ಸೋಶಿಯಲ್​​ ಮೀಡಿಯಾ ಹಾಗೂ ಕೆಲವು ತಜ್ಞರಿಂದ ಮಾಹಿತಿ ಸಂಗ್ರಹಿಸಿ ನೀಡಲಾಗಿದೆ. ನಿಮಗೆ ಯಾವುದೇ ಆರೋಗ್ಯ ಸಮಸ್ಯೆ ಮತ್ತು ಗೊಂದಲಗಳಿದ್ದಲ್ಲಿ ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ.

    ಗೆದ್ದ ಖುಷಿಯಲ್ಲಿದ್ದ RCB ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ತೆರಳಿದ ಧೋನಿ; ನಿಮ್ಮಿಂದ ಇದನ್ನು ನೀರಿಕ್ಷೆ ಮಾಡಿರಲಿಲ್ಲ ಎಂದ್ರು ಫ್ಯಾನ್ಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts