ಮಾದಕವಸ್ತುಗಳಿಗೆ ಬಲಿಯಾಗದಿರಿ : ಪಡುಬಿದ್ರಿ ಠಾಣೆ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಕಿವಿಮಾತು

madaka
ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಪ್ರಸನ್ನ ಎಂ.ಎಸ್. ಮಾತನಾಡಿದರು
Published on

ಪಡುಬಿದ್ರಿ: ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ನಿಮ್ಮ ಆರೋಗ್ಯ ಉತ್ತಮವಾಗಿದ್ದರೆ ಮುಂದೆ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಪಡುಬಿದ್ರಿ ಪೊಲೀಸ್ ಠಾಣೆ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಕಿವಿಮಾತು ಹೇಳಿದರು.

ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ಆಶ್ರಯದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ ಸಹಯೋಗದಲ್ಲಿ ಬುಧವಾರ ಮಾದಕವಸ್ತು ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು. ಆಡಳಿತ ಮಂಡಳಿ ಪ್ರತಿನಿಧಿ ಪ್ರೊ.ನಿತ್ಯಾನಂದ ಮಾತನಾಡಿ, ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಬೇಡಿ. ಸ್ನೇಹದ ಹೆಸರಿನಲ್ಲಿ ಮೋಸ ಮಾಡುವವರಿಂದ ದೂರವಿರಿ ಎಂದು ಸಲಹೆ ನೀಡಿದರು. ಪ್ರಾಂಶುಪಾಲ ಸಂಜೀವ್ ನಾಯಕ್, ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಶ್ರೀಕಾಂತ್ ರಾವ್ ಉಪಸಿತರಿದ್ದರು. ಸಿರಿ ಸ್ವಾಗತಿಸಿದರು. ನಿತೀಶಾ ನಿರೂಪಿಸಿದರು. ಸಹನಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net