More

    ಕನ್ನಡ ಭಾಷೆ ಮೇಲಿನ ಅಭಿಮಾನ ಮರೆಯದಿರಿ

    ಹೊನ್ನಾವರ: ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಉನ್ನತ ಹುದ್ದೆಯನ್ನು ಏರಬೇಕು. ಕನ್ನಡ ಭಾಷೆಯ ಅಭಿಮಾನವನ್ನು ಹೊಂದಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಹೇಳಿದರು.

    ಪಟ್ಟಣದ ಮಾಥೋಮಾ ಸಭಾಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕದ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ. 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಅವರು ಮಾತನಾಡಿದರು.

    ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು.

    ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಕನ್ನಡ ವಿಷಯದಲ್ಲಿ ಶೇ. 100 ಅಂಕ ಪಡೆದ 104 ವಿದ್ಯಾರ್ಥಿಗಳನ್ನು ಹಾಗೂ ಪ್ರೌಢಶಾಲೆಯ ಕನ್ನಡ ಭಾಷೆ ಬೋಧಿಸುವ ಶಿಕ್ಷಕರನ್ನು ಸನ್ಮಾನಿಸಲಾಯಿತು.

    ಮುಖ್ಯ ಅತಿಥಿಗಳಾಗಿ ಸಾಹಿತಿ ಡಾ. ಎಸ್.ಡಿ.ಹೆಗಡೆ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಪಿ.ಆರ್.ನಾಯ್ಕ, ಜಾರ್ಜ್ ಫರ್ನಾಡೀಸ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಂ.ಹೆಗಡೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಟಿ.ನಾಯ್ಕ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ನಾಯ್ಕ, ಸಾಧನಾ ಬರ್ಗಿ ಮಾತನಾಡಿದರು.

    ಕಸಾಪ ತಾಲೂಕು ಅಧ್ಯಕ್ಷ ಎಸ್.ಎಚ್.ಗೌಡ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಗಜಾನನ ನಾಯ್ಕ ವಂದಿಸಿದರು. ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ಕೋಶಾಧ್ಯಕ್ಷ ನಾರಾಯಣ ಹೆಗಡೆ, ಸಾಹಿತ್ಯ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts