ಹುಬ್ಬಳ್ಳಿ: ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಂಡ್ಯ ಎಸ್ಪಿಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ನಾಗಮಂಗಲ ಗಲಭೆ ಪ್ರಕರಣ ಬೆನ್ನೆಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಎತ್ತಂಗಡಿ!
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಇದ್ದಂತಿದೆ. ನಿಜವಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸೂಚಿಸಿದರು.
ನಾಗಮಂಗಲದಲ್ಲಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಗೆ ಎಲ್ಲದೂ ಸರ್ಕಾರದ ನಿಯಮ ಮತ್ತು ಪೊಲೀಸ್ ಇಲಾಖೆ ಅನುಮತಿ ಮೇರೆಗೆ ನಡೆದಿದೆ. ಗಲಭೆ ಖಂಡಿಸಿ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ಹೇಳಿದರು. ಮಸೀದಿ ಇರುವುದೇ ರಸ್ತೆಯಲ್ಲಿ. ಇನ್ನು,ಇಲ್ಲಿ ಓಡಾಡಬೇಡಿ, ವಾದ್ಯ ಬರಿಸಬೇಡಿ ಎಂದರೆ ಹೇಗೆ? ಇದನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಎಂದು ಜೋಶಿ ಹರಿಹಾಯ್ದರು.
ಗಲಭೆಯಲ್ಲಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದವರನ್ನು ಬಿಟ್ಟು ಗಣಪತಿ ಇಟ್ಟವರನ್ನು, ಸಿಕ್ಕ ಸಿಕ್ಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಕ್ರಮ ಜರುಗಿಸುವುದು ಸರಿಯಲ್ಲ ಎಂದು ಜೋಶಿ ಖಂಡಿಸಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರಲ್ಲಿ ಕ್ಷಮೆಯಾಚಿಸಿದ ಹೋಟೆಲ್ ಮಾಲೀಕ, ಏನಿದು ಪ್ರಕರಣ?