

ಬೆಂಗಳೂರು: ವಿಜೃಂಭಣೆಯಿಂದ ನನ್ನ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ(Don't have a lavish birthday) ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ(H D Kumaraswamy) ಮನವಿ ಮಾಡಿದ್ದಾರೆ.
ಡಿ.16ರಂದು ನನ್ನ ಜನದಿನ. ಪ್ರತಿ ವರ್ಷ ಪಕ್ಷದ ಕಾರ್ಯಕರ್ತರು ಬಹಳ ಅರ್ಥಪೂರ್ಣವಾಗಿ ನನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ನನ್ನ ಬದುಕಿಗೆ ಸಾರ್ಥಕತೆ ತಂದು ಕೊಟ್ಟಿದ್ದೀರಿ. ರಾಜಕೀಯವಾಗಿ ನನ್ನ ಯಶಸ್ಸಿಗೆ ಮೂಲ ಆಧಾರಸ್ತಂಭವೇ ತಾವುಗಳು.
ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ನಾನು ನವದೆಹಲಿಯಲ್ಲಿಯೇ ಉಳಿಯಬೇಕಾಗಿದೆ. ಅಲ್ಲದೆ, ಬೆಳಗಾವಿ ಸುವರ್ಣಸೌಧದಲ್ಲಿ ಕಲಾಪವೂ ಸಾಗಿದೆ. ಇಂಥಹ ಸನ್ನಿವೇಶದಲ್ಲಿ ವಿಜೃಂಭಣೆಯ ಹುಟ್ಟುಹಬ್ಬ ಬೇಡ ಎಂದು ಹೇಳಿದ್ದಾರೆ.
ತಾವುಗಳು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಅಷ್ಟು ಸಾಕು ನನಗೆ. ಸಾಧ್ಯವಾದರೆ ಸಮಾಜಕ್ಕೆ, ದುರ್ಬಲ ಜನರಿಗೆ ಏನಾದರೂ ಸಹಾಯ ಮಾಡಿ. ಜನಸೇವೆ ಜಾತ್ಯತೀತ ಜನತಾದಳ ಪಕ್ಷದ ಮೂಲತತ್ತ್ವ. ಅದೇ ನನಗೆ ತಾವು ನನಗೆ ಕೊಡುವ ಉಡುಗೊರೆ ಎಂದು ಕುಮಾರಸ್ವಾಮಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.