21 C
Bengaluru
Wednesday, January 22, 2020

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ವಿಜಯವಾಣಿ ಸುದ್ದಿಜಾಲ ಧಾರವಾಡ

2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ ವಿರೋಧಿಸುತ್ತದೆ. ದೇಶದ ಕಬ್ಬು ಬೆಳೆಗಾರರ ವಿರೋಧಿಯಾಗಿರುವ ಬೊಲ್ಸೇನಾರೋ ಅವರನ್ನು ಕರೆತರುವುದು ಬೇಡ ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಕಬ್ಬು ಬೆಳೆಗಾರರಿಗೆ ವಿಶ್ವ ವಾಣಿಜ್ಯ ಒಪ್ಪಂದ ಉಲ್ಲಂಘಿಸಿ ಹೆಚ್ಚಿನ ಸಬ್ಸಿಡಿ ನೀಡುತ್ತಿರುವುದಾಗಿ ಬ್ರೆಜಿಲ್ ಪ್ರಧಾನಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ಎಫ್​ಆರ್​ಪಿ ದರ ನಿಗದಿ ಮಾಡುತ್ತಿರುವುದನ್ನು ರದ್ದುಪಡಿಸಿ ಎಂದು ಕೇಳಿದ್ದು, ಅವರೇ ವಾದಿಯಾಗಿದ್ದಾರೆ. ಒಂದು ವೇಳೆ ಅವರು ಭಾರತಕ್ಕೆ ಬಂದರೆ ರೈತ ಸಂಘದಿಂದ ತೀವ್ರ ಪ್ರತಿರೋಧ ವ್ಯಕ್ತಪಡಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಟಿ. ನುಲೇನೂರ ಎಂ. ಶಂಕರಪ್ಪ, ಮಲ್ಲಿಕಾರ್ಜುನ ಸತ್ಯಂಪೇಟ, ಚಾಮರಸ ಮಾಲಿಪಾಟೀಲ, ನಾಗಪ್ಪ ಉಂಡಿ, ವೀರಣ್ಣ ಬಡಿಗೇರ, ರಾಮಸ್ವಾಮಿ, ಇತರರಿದ್ದರು.

ರೈತರ ಬಹಿರಂಗ ಸಭೆ: ವಿಶ್ವ ರೈತ ದಿನಾಚರಣೆ ಪ್ರಯುಕ್ತ ರೈತ ಚೇತನಗಳಾದ ಕೆ.ಎಸ್. ಪುಟ್ಟಣ್ಣಯ್ಯ ಹಾಗೂ ಎನ್.ಡಿ. ಸುಂದರೇಶ್ ಅವರ ಜನ್ಮದಿನದ ಅಂಗವಾಗಿ ಡಿ. 23ರಂದು ಬೆಳಗ್ಗೆ 10.30ಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯಲ್ಲಿ ರೈತರ ಬೃಹತ್ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ. 100 ಮಹಿಳಾ ರೈತರಿಗೆ ‘ಕಾಯಕ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ನಾಗೇಂದ್ರ ತಿಳಿಸಿದರು. ರಾಷ್ಟ್ರ ಮಟ್ಟದ ಚಿಂತಕರು, ಹೋರಾಟಗಾರರು, ಪ್ರಗತಿಪರ ಸಂಘಟನೆಗಳ ಮುಖಂಡರು, ಎಲ್ಲ ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಒಪ್ಪಂದಗಳ ವಿರುದ್ಧ ಹೋರಾಟ ರೂಪಿಸಲು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

ಅವರಿಂದ ಒಳ್ಳೆಯದಾಗಲಿ: ಸಾಮೂಹಿಕ ನಾಯಕತ್ವದಲ್ಲಿ ರೈತ ಸಂಘವನ್ನು ಮುನ್ನಡೆಸುವ ಕುರಿತು ಇತ್ತೀಚೆಗೆ ಇಲ್ಲಿ ಪೂರ್ವಭಾವಿ ಸಭೆ ಜರುಗಿದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂದಿನ ಸಭೆಗೆ ಯಾರೂ ಆಹ್ವಾನಿಸಿಲ್ಲ. ರೈತ ಚಳವಳಿ ಇಡೀ ಸಮಾಜವನ್ನು ಒಳಗೊಂಡಿದೆ. ಚಳವಳಿಗೆ ಗುರಿ ಇರಬೇಕು. ಆದರೆ ಹಸಿರು ಟವೆಲ್ ಹಾಕಿಕೊಂಡು ಮರಳು ದಂಧೆ, ಕಬ್ಬು ಕಾರ್ಖಾನೆಗಳಲ್ಲಿ ಬ್ಲ್ಯಾಕ್​ವೆುೕಲ್ ಮಾಡಿದ ಕೆಲವರಿಗೆ ಸಾಮೂಹಿಕ ನಾಯಕತ್ವ ಬೇಕಾಗಿದೆ. ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲುವುದಿಲ್ಲ ಎಂದು ವ್ಯಂಗ್ಯವಾಡಿದರು. ಅವರಿಂದ ರೈತ ಕುಲಕ್ಕೆ ಒಳ್ಳೆಯದಾಗುವುದಿದ್ದರೆ ಆಗಲಿ ಎಂದೂ ಹೇಳಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...