ಪಾಕಿಸ್ತಾನಕ್ಕೆ ನಾವು ಪ್ರಯಾಣಿಸುತ್ತಿಲ್ಲವೆಂದು ನಿಮಗ್ಯಾರು ಹೇಳಿದ್ದು; ಚಾಂಪಿಯನ್ಸ್​ ಟ್ರೋಫಿ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಉಪಾಧ್ಯಕ್ಷ

India Pakistan

ನವದೆಹಲಿ: ಚುಟುಕು ವಿಶ್ವ ಸಮರದಲ್ಲಿ ಗೆದ್ದು ಭಾರೀ ಹುಮ್ಮಸ್ಸಿನಲ್ಲಿರುವ ಟೀಮ್​ ಇಂಡಿಯಾ ನೂತನ ಕೋಚ್​ ಗೌತಮ್​ ಗಂಭೀರ್​ ಮಾರ್ಗದರ್ಶನದಲ್ಲಿ ಚಾಂಪಿಯನ್ಸ್​ ಟ್ರೋಫಿಯನ್ನು ಗೆಲ್ಲುವ ಹುಮ್ಮಸ್ಸಿನಲ್ಲಿ ತಯಾರಿ ನಡೆಸುತ್ತಿದೆ. 2013ರಲ್ಲಿ ಕ್ಯಾಪ್ಟನ್​ ಕೂಲ್​ ಎಂ.ಎಸ್. ಧೋನಿ ನಾಯಕತ್ವದಲ್ಲಿ ಕಡೆಯದಾಗಿ ಟ್ರೋಫಿ ಎತ್ತಿ ಹಿಡಿದ್ದ ಭಾರತ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್​ ಪಂದ್ಯದಲ್ಲಿ ಮುಗ್ಗರಿಸಿತ್ತು. ಈ ಬಾರಿಯ ಟೂರ್ನಿಯಲ್ಲಿ ಗೆದ್ದು ಕಪ್​ಅನ್ನು ವಾಪಸ್​ ತರುವ ಬಗ್ಗೆ ರೋಹಿತ್​ ಚಿಂತನೆ ನಡೆಸಿದ್ದು, ಅದಕ್ಕೆ ಪೂರಕವೆಂಬಂತೆ ಯೋಜನೆಗಳನ್ನು ರೂಪಿಸುತ್ತಿದ್ದಾರೆ.

ಟಿ20 ವಿಶ್ವಕಪ್ ಗೆದ್ದ ಹುಮ್ಮಸ್ಸಿನಲ್ಲಿರುವ ಆಟಗಾರರು ಈ ಬಾರಿಯ ಟ್ರೋಫಿಯನ್ನು ತವರಿಗೆ ತರುವ ಸಂಕಲ್ಪವನ್ನು ತೊಟ್ಟಿದ್ದು, ಈ ಆಸೆ ಈಡೇರುವುದು ಬಹುತೇಕ ಡೌಟ್​ ಎಂದು ಹೇಳಲಾಗಿದೆ. ಏಕೆಂದರೆ ಈ ಬಾರಿಯ ಟೂರ್ನಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವುದರಿಂದ ಭಾರತ ತಂಡ ಭಾಗವಹಿಸುವುದು ಡೌಟ್​ ಎಂದು ಹೇಳಲಾಗಿದೆ. ಈಗಾಗಲೇ ಬಿಸಿಸಿಐ ಪಾಕಿಸ್ತಾನಕ್ಕೆ ಆಟಗಾರರನ್ನು ಕಳುಹಿಸುವ ಬಗ್ಗೆ ತನ್ನ ನಿರ್ಧಾರವನ್ನು ಪ್ರಕಟಿಸಿದ್ದು, ಭಾರತದ ಪಂದ್ಯಗಳನ್ನು ಹೈಬ್ರಿಡ್​ ಮಾದರಿಯಲ್ಲಿ ನಡೆಸುವಂತೆ ಮನವಿ ಮಾಡಿದೆ. ಐಸಿಸಿ ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದೆ. ಆದರೆ, ಈ ವಿಚಾರವಾಗಿ ಮಾತನಾಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್​ ಶುಕ್ಲಾ ಹೊಸದೊಂದು ಟ್ವಿಸ್ಟ್​ಅನ್ನು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ರಾಜೀವ್​ ಶುಕ್ಲಾ, ಚಾಂಪಿಯನ್ಸ್​ ಟ್ರೋಫಿಯಲ್ಲಿ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲವೆಂದು ನಿಮಗೆ ಯಾರು ಹೇಳಿದ್ದು, ನಿಮಗೆ ಈ ರೀತಿಯ ಸುದ್ದಿಗಳನ್ನು ಯಾರು ನೀಡುತ್ತಾರೆ ಎಂಬುದು ನಮಗೆ ತಿಳಿದಿಲ್ಲ. ಬಿಸಿಸಿಐ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ ಎಂದು ರಾಜೀವ್​ ಶುಕ್ಲಾ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸದಿರುವ ಬಗ್ಗೆ ತೀರ್ಮಾನಿಸಿರುವ ಸುದ್ದಿಯನ್ನು ತಳ್ಳಿಹಾಕಿದ್ದಾರೆ.

Rajeev Shukla

ಇದನ್ನೂ ಓದಿ: ಲಾರಿ-ಅಂಬುಲೆನ್ಸ್​ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಮಂದಿ ಸಾವು

ಭಾರತಕ್ಕಿಂತ ಪಾಕಿಸ್ತಾನಕ್ಕೆ ಲಾಸ್​

ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್​ ಇಂಡಿಯಾ ತಮ್ಮ ದೇಶಕ್ಕೆ ಬರಬೇಕೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಾಗೂ ಆ ದೇಶದ ಕ್ರಿಕೆಟ್ ಅಭಿಮಾನಿಗಳು ಬಲವಾಗಿ ಬಯಸಿದ್ದಾರೆ. ಆದರೆ, ಟೀಮ್​ ಇಂಡಿಯಾವನ್ನು ಅಲ್ಲಿಗೆ ಕಳುಹಿಸಲು ಬಿಸಿಸಿಐ ಸಿದ್ಧವಿಲ್ಲ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗಾಗಲೇ ಚಾಂಪಿಯನ್ಸ್ ಟ್ರೋಫಿ ಕರಡು ವೇಳಾಪಟ್ಟಿಯನ್ನು ಬಿಸಿಸಿಐಗೆ ಕಳುಹಿಸಿದೆ. 2025 ಮಾರ್ಚ್ 1 ರಂದು ಲಾಹೋರ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿದೆ. ಭದ್ರತಾ ಕಾರಣಗಳಿಗಾಗಿ ಟೀಮ್ ಇಂಡಿಯಾ ಆಡುವ ಎಲ್ಲ ಪಂದ್ಯಗಳನ್ನು ಲಾಹೋರ್‌ನಲ್ಲಿ ನಡೆಸಲಾಗುವುದು ಎಂದು ಹೇಳಿದೆ. ಆದರೆ, ಬಿಸಿಸಿಐ ಅದಕ್ಕೆ ಒಪ್ಪುತ್ತಿಲ್ಲ. ಟೀಮ್​ ಇಂಡಿಯಾ ಆಡುವ ಪಂದ್ಯಗಳನ್ನು ದುಬೈ ಅಥವಾ ಶ್ರೀಲಂಕಾದಲ್ಲಿ ಆಯೋಜಿಸುವಂತೆ ಬಿಸಿಸಿಐ ಈಗಾಗಲೇ ಐಸಿಸಿಗೆ ಮನವಿ ಮಾಡಿದೆ.

ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ ಇರುವ ಕ್ರೇಜ್​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ ನಿರೀಕ್ಷೆಗೆ ಬಿಸಿಸಿಐ ಆಘಾತ ನೀಡಿದೆ. ಬಹುತೇಕ ಟೀಮ್​ ಇಂಡಿಯಾ ಪಾಕಿಸ್ತಾನ ತೆರಳುವುದು ಅನುಮಾನವಾಗಿದೆ. ಮುಂದಿನ ದಿನಗಳಲ್ಲಿ ಬಿಸಿಸಿಐ ಯಾವ ರೀತಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

Share This Article

Health Tips | ಕರಿಬೇವು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ: ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ..

ಅಡುಗೆಯಲ್ಲಿ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವ ಸಲುವಾಗಿ ಕರಿಬೇವನ್ನು ಉಪಯೋಗಿಸುತ್ತಾರೆ. ಇದರಿಂದ ಆರೋಗ್ಯಕ್ಕೂ ಎಷ್ಟೆಲ್ಲಾ ಪ್ರಯೋಜನ…

ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿದೆಯೇ; ಅದಕ್ಕೆ ಕಾರಣ & ಲಕ್ಷಣವೇನು ಎಂಬ ಮಾಹಿತಿ ಇಲ್ಲಿದೆ | Health Tips

ನೀವು ಆಹಾರವನ್ನು ಸೇವಿಸಿದಾಗ ನಿಮ್ಮ ಜೀರ್ಣಾಂಗವು ಅದನ್ನು ತುಂಡುಗಳಾಗಿ ಮಾಡುತ್ತದೆ ಮತ್ತು ಅದನ್ನು ಶಕ್ತಿಯಾಗಿ ಬಳಸುತ್ತದೆ.…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ