More

    ಸೋಲು-ಗೆಲುವು ಮುಖ್ಯ ಆಗದಿರಲಿ

    ಚಿತ್ರದುರ್ಗ: ಕೋಟೆನಗರಿಯಲ್ಲೇ ಮುಂದಿನ ವರ್ಷ ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಕೂಟ ಆಯೋಜಿಸುವ ಚಿಂತನೆ ಇದೆ ಎಂದು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.

    ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನಿಂದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಶುಕ್ರವಾರ ರಾತ್ರಿ ಆರಂಭವಾದ 22 ವರ್ಷದೊಳಗಿನ ರಾಜ್ಯಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

    ಯಾವುದೇ ಕ್ರೀಡೆಯಾಗಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಸತತ ಪರಿಶ್ರಮ ಪಟ್ಟರೆ ಈ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧಕರಾಗಿ ಜಿಲ್ಲೆಗೆ ಕೀರ್ತಿ ತರಬಹುದು. ಕಲೆ, ಸಾಂಸ್ಕೃತಿಕವಾಗಿಯೂ ಕೋಟೆನಾಡು ವಿಜೃಂಭಿಸಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕು ಎಂದು ಸಲಹೆ ನೀಡಿದರು.

    ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಅಹೋಬಲ ಟಿವಿಎಸ್ ಷೋರೂಂನ ಮಾಲೀಕ ಅರುಣ್‌ಕುಮಾರ್, ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಬಿ.ಸಿ.ರಮೇಶ್, ಭೀಮಸಮುದ್ರದ ಮಲ್ಲಿಕಾರ್ಜುನ್, ಪತ್ರಕರ್ತ ಟಿ.ಕೆ.ಬಸವರಾಜ್, ಸಂಘಟಕ ಪಿ.ಸಿ. ಮುರುಗೇಶ್, ನಾಗಭೂಷಣ್, ನಾಯ್ಡು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts