More

    ಬದುಕು ಕಟ್ಟಿಕೊಳ್ಳಬೇಕಾದ ವಯಸ್ಸಿನಲ್ಲಿ ಜೀವನ ಹಾಳು ಮಾಡಿಕೊಳ್ಳಬೇಡಿ

    ಹುಣಸೂರು: ಬದುಕು ಕಟ್ಟಿಕೊಳ್ಳಬೇಕಾದ ವಯಸ್ಸಿನಲ್ಲಿ ಮಾದಕ ವಸ್ತುಗಳ ಜಾಲಕ್ಕೆ ಸಿಕ್ಕು ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಮುನಿಯಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಬೆಳಕು ಸೇವಾ ಸಂಸ್ಥೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ-2023 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮಾದಕ ವಸ್ತುಗಳು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸದ್ದಿಲ್ಲದೆ ಹರಡುತ್ತಿದೆ. ಸಮಾಜಘಾತುಕ ಶಕ್ತಿಗಳ ಮೂಲಕ ಮಾದಕ ವಸ್ತುಗಳು ಯುವ ಸಮೂಹದ ಕೈ ಸೇರುತ್ತಿದೆ. ಅದರಲ್ಲೂ ಶಾಲಾ-ಕಾಲೇಜುಗಳ ಆವರಣವೇ ಇವರ ಅಡ್ಡೆಯಾಗಿದೆ. ಜನ್ಮ ನೀಡಿದ ತಂದೆ-ತಾಯಿ ನೋವು, ಕಷ್ಟಗಳನ್ನು ಮಕ್ಕಳು ಅರಿತು ಇಂತಹ ಕೆಟ್ಟ ಸಹವಾಸಗಳಿಂದ ದೂರವಿದ್ದು ಶಿಕ್ಷಣ ಕಲಿತು ಉತ್ತಮ ಪ್ರಜೆಗಳಾಬೇಕು ಎಂದರು.

    ಬೆಳಕು ಸೇವಾ ಸಂಸ್ಥೆ ಮುಖ್ಯಸ್ಥ ನಿಂಗರಾಜ್ ಮಲ್ಲಾಡಿ ಮಾತನಾಡಿ, ಕಟ್ಟೆಮಳಲವಾಡಿ ಗ್ರಾಮವು ತಾಲೂಕಿನಲ್ಲಿ ದೊಡ್ಡ ಗ್ರಾಮವಾಗಿದ್ದು 8 ಸಾವಿರ ಜನಸಂಖ್ಯೆ ಹೊಂದಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ಜಾತಿಗಳಿಗೆ ಸೇರಿದ ಬಡ ಕುಟುಂಬಗಳು ಹೆಚ್ಚು ವಾಸ ಮಾಡುವ ಈ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಮಾದಕ ವಸ್ತುಗಳ ಮಾರಾಟಗಳು ಎಗ್ಗಿಲ್ಲದೆ ನಡುಯುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಗೊತ್ತಿದ್ದರೂ ಗೊತ್ತಿಲ್ಲದ ರೀತಿ ಮೌನ ವಹಿಸಿದ್ದಾರೆ ಎಂದು ಆರೋಪಿಸಿದರು.

    ಅಬಕಾರಿ ಇನ್ಸ್‌ಪೆಕ್ಟರ್ ನಾಗಲಿಂಗಸ್ವಾಮಿ ಮಾತನಾಡಿ, ಗ್ರಾಮದಲ್ಲಿ ಅಕ್ರಮ ಸಾರಾಯಿ ಮತ್ತು ಮಾದಕವಸ್ತುಗಳ ಮಾರಾಟದ ಕುರಿತು ಇಲಾಖೆಗೆ ಮಾಹಿತಿ ಇದ್ದು, ಅಕ್ರಮಗಳನ್ನು ತಡೆಗಟ್ಟಲು ಕ್ರಮಕೈಗೊಳ್ಳಲಾಗಿದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ಮುಂನಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದೇವೆ. ಇದಕ್ಕೆ ಗ್ರಾಮಸ್ಥರ ಸಹಕಾರವೂ ಅಗತ್ಯವಿದೆ ಎಂದರು.

    ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಗೋಪಿನಾಥ್, ಶಿಕ್ಷಕರಾದ ರವಿ, ಕುಬೇರ, ಲೋಕೇಶ್, ಮಹದೇವನಾಯ್ಕ, ಹೇಮಾಪ್ರಸಾದ್, ಸಜಿಲಾ, ಜೀವರತ್ನಂ, ಪೋಲಿಸ್ ಮತ್ತು ಅಬಕಾರಿ ಇಲಾಖೆಯ ಸಿಬ್ಬಂದಿ, ಸಮೃದ್ಧಿ ಮಹಿಳಾ ಸಂಘದ ಮಹದೇವಮ್ಮ, ಪ್ರಭಾ, ಗಿರಿಜಮ್ಮ ಮತ್ತು ಶಾಲಾ ಮಕ್ಕಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts