More

    ಏಕಪಕ್ಷೀಯ ನಿರ್ಧಾರ ಕೈಗೊಂಡು ಅಪಾಯ ಮೈಮೇಲೆ ಎಳೆದುಕೊಳ್ಳಬೇಡಿ: ಚೀನಿಯರ ಎಚ್ಚರಿಕೆ

    ನವದೆಹಲಿ: ವಾಸ್ತವ ಗಡಿರೇಖೆಯ ಬಳಿಯ ಗಲ್ವಾನ್​ ಕಣಿವೆಯಲ್ಲಿ ಸೋಮವಾರ ರಾತ್ರಿ ಚೀನಿಯರು ನಡೆಸಿದ ದಾಳಿಯಲ್ಲಿ ಭಾರತದ ಒಬ್ಬ ಸೇನಾಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮರಾದ ಬೆನ್ನಲ್ಲೇ, ಈ ವಿಷಯವಾಗಿ ಏಕಪಕ್ಷೀಯ ನಿರ್ಧಾರ ಕೈಗೊಂಡು ಅಪಾಯ ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಚೀನಾ ಧಮ್ಕಿ ಹಾಕಿದೆ.

    ಬೀಜಿಂಗ್​ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಈ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
    ಇದಕ್ಕೂ ಮುನ್ನ ಲಡಾಖ್​ ಬಿಕ್ಕಟ್ಟನ್ನು ಪರಿಹರಿಸಲು ಭಾರತ ಮತ್ತು ಚೀನಾ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳು ಸೇನೆಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳುತ್ತಿವೆ. ಸೋಮವಾರ ರಾತ್ರಿ ಗಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ತಿಕ್ಕಾಟ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಚೀನಿಯರು ದಾಳಿ ಮಾಡಿದರು ಎನ್ನಲಾಗಿದೆ.

    ಈ ದಾಳಿಯಲ್ಲಿ ಭಾರತದ ಕರ್ನಲ್​ ದರ್ಜೆಯ ಒಬ್ಬ ಅಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮರಾದರು ಎಂದು ಸೇನಾಪಡೆ ಮೂಲಗಳು ತಿಳಿಸಿವೆ.

    ಲಡಾಖ್​ ಬಿಕ್ಕಟ್ಟನ್ನು ಶಮನಗೊಳಿಸಲು ಭಾರತ ಮತ್ತು ಚೀನಾದ ಮಿಲಿಟರಿ ಅಧಿಕಾರಿಗಳು ಮಂಗಳವಾರ ಮಾತುಕತೆ ಮುಂದುವರಿಸಿದ್ದಾರೆ ಎಂದು ಹೇಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts