ದಯವಿಟ್ಟು ಪಾಕಿಸ್ತಾನದ ಬಗ್ಗೆ ಮಾತನಾಡಬೇಡಿ… ಭಾರತದ ವಿರುದ್ಧ ಸರಣಿಗೂ ಮುನ್ನ ಬಾಂಗ್ಲಾ ಆಟಗಾರ ಹೀಗೆನ್ನಲು ಕಾರಣವೇನು?

Bangla Cricket Team

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಗೆಲ್ಲುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಬಾಂಗ್ಲಾದೇಶ ತಂಡವು ಭಾರತದ ವಿರುದ್ಧವೂ ಅದೇ ಪ್ರದರ್ಶನ ಮುಂದುವರೆಸಬೇಕೆಂಬ ಇರಾದೆಯಲ್ಲಿದೆ. ಸೆಪ್ಟೆಂಬರ್​ 19ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್​ ಸರಣಿಗೆ ಸಂಬಂಧಿಸಿದಂತೆ ಈಗಾಗಲೇ ಉಭಯ ದೇಶಗಳ ಕ್ರಿಕೆಟ್​ ಮಂಡಳಿಗಳು ಬಲಿಷ್ಠ ತಂಡವನ್ನೇ ಪ್ರಕಟಿಸಿದ್ದು,  ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದಾಗಿದೆ.

ಸೆಪ್ಟೆಂಬರ್​ 19ರಂದು ಚೆನ್ನೈನಲ್ಲಿ ಆರಂಭವಾಗಲಿರುವ ಸರಣಿಯ ಮೊದಲ ಪಂದ್ಯಕ್ಕೆ ಈಗಾಗಲೇ ಉಭಯ ತಂಡಗಳು ತಯಾರಿ ಆರಂಭಿಸಿದ್ದು, ಗೆಲುವಿನ ಮೂಲಕ ಸರಣಿ ಆರಂಭಿಸುವ ಬಗ್ಗೆ ಯೋಜನೆ ರೂಪಿಸುತ್ತಿವೆ. ಈ ಕುರಿತು ಬಾಂಗ್ಲಾದ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ಲಿಟನ್​ ದಾಸ್​ ಮಾತನಾಡಿದ್ದು, ಹಲವು ವಿಚಾರಗಳ ಕುರಿತು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸೌರವ್​ ಗಂಗೂಲಿ ಕೂಡ ಮಾತನಾಡಿದ್ದಾರೆ, ಈಗಲಾದರೂ ಕಣ್ಣು ತೆರೆಯಿರಿ; ಮಾಜಿ ಆಟಗಾರನ ಹೇಳಿಕೆ ವೈರಲ್​

ನಾವು ಪಾಕಿಸ್ತಾನದ ವಿರುದ್ಧ ಉತ್ತಮವಾಗಿ ಆಡಿದ್ದೇವೆ. ಇದು ಹಳೆಯ ವಿಚಾರವಾಗಿದ್ದು, ನಾವು ಮುಂದಕ್ಕೆ ನೋಡುತ್ತಿದ್ದೇವೆ. ದಯವಿಟ್ಟು ಪಾಕಿಸ್ತಾನದ ಬಗ್ಗೆ ಇಲ್ಲಿ ಕೇಳಬೇಡಿ. ನೀವು ಪಾಕಿಸ್ತಾನ ಸರಣಿಯ ಬಗ್ಗೆ ಹೆಚ್ಚು ಮಾತನಾಡದಿದ್ದರೆ ಉತ್ತಮವಾಗಿದೆ. ನಮ್ಮ ಮುಂದೆ ದೊಡ್ಡ ಸವಾಲಿನ ಸರಣಿ ಇದೆ. ನಾವು ಅದರ ಬಗ್ಗೆ ಯೋಚಿಸಬೇಕಿದೆ.

ನಾವು ಭಾರತದ ನೆಲದಲ್ಲಿ ಟೆಸ್ಟ್​ ಸರಣಿ ಆಡುತ್ತಿದ್ದು, ಅವರು ಯಾವಾಗಲೂ ಉತ್ತಮ ತಂಡವಾಗಿದ್ದಾರೆ. ಇದು ಅತ್ಯಂತ ಸವಾಲಿನ ಅಥವಾ ತುಂಬಾ ಸುಲಭ ಎಂದು ನಾನು ಹೇಳುವುದಿಲ್ಲ. ಅವರು ತಮ್ಮದೇ ಆದ ಪರಿಸ್ಥಿತಿಗಳಲ್ಲಿ ಉತ್ತಮ ತಂಡವಾಗಿದೆ. ನೀವು ಶ್ರೇಯಾಂಕಗಳನ್ನು ನೋಡಿದರೆ, ನಮಗೆ ಇದು ಸವಾಲಿನ ಸರಣಿಯಾಗಿದೆ ನಾನು ಭಾವಿಸುತ್ತೇನೆ. ಭಾರತವು ದೊಡ್ಡ ತಂಡವಾಗಿದೆ ಮತ್ತು ಚೆಂಡು ಕೂಡ ಬದಲಾಗುತ್ತದೆ. ನಾವು ಆ ಚೆಂಡಿನೊಂದಿಗೆ ಆಡುವುದು ಅಪರೂಪ. ಇದು ಸವಾಲಿನದಾಗಿರುತ್ತದೆ. ಆಟಗಾರರು ತುಂಬಾ ಶ್ರಮಿಸುತ್ತಿದ್ದಾರೆ ಎಂದು ವಿಕೆಟ್​ ಕೀಪರ್​ ಬ್ಯಾಟರ್​ ಲಿಟನ್​ ದಾಸ್​ ಹೇಳಿದ್ದಾರೆ.

Share This Article

ಒಂದು ಕೈಯಲ್ಲಿ ಫೋನ್ ಹಿಡಿದುಕೊಂಡು ಸ್ಕ್ರೋಲಿಂಗ್ ಮಾಡ್ತೀರಾ?  ಇದ್ರಿಂದಲೇ ಗೊತ್ತಾಗುತ್ತದೆ ನಿಮ್ಮ Personality traits…

ಬೆಂಗಳೂರು:  ಈಗ  ಕೆಲವು ಅಧ್ಯಯನಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು (Personality traits ) ಹುಟ್ಟಿದ ದಿನಾಂಕ, ಕಣ್ಣಿನ…

Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?

ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ