More

    ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಬೇಡಿ: ರಾಜಕೀಯ ಪಕ್ಷಗಳಿಗೆ ನಗರ ಡಿಸಿ ಸೂಚನೆ

    ಬೆಂಗಳೂರು: ಚುನಾವಣೆ ಆಯೋಗವು ಹಾಲಿ ಲೋಕಸಭಾ ಚುನಾವಣೆ ವೇಳೆ ಮಕ್ಕಳ ಬಳಕೆಯನ್ನು ನಿಷೇಧಿಸಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಮಕ್ಕಳನ್ನು ಬಳಸಿಕೊಳ್ಳದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಸೂಚನೆ ನೀಡಿದ್ದಾರೆ.

    ವಿಶ್ವಸಂಸ್ಥೆಯ ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಂಬಂಧಿಸಿದಂತೆ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ತೊಡಕುನ್ನುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸಿದಂತೆ ಕ್ರಮಕೈಗೊಳ್ಳಲು ನಿರ್ದೇಶಿಸಿರುತ್ತದೆ. ಅದರಂತೆ ರಾಜಕೀಯ ಪಕ್ಷದ ಅಭ್ಯರ್ಥಿಗಳು, ಸ್ವತಂತ್ರ ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಾಗೂ ರಾಜಕೀಯ ಪಕ್ಷದ ಕುರಿತು ಮತ ನೀಡುವಂತೆ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಯಾವುದೇ ರೀತಿಯಲ್ಲಿ ಬಳಸಿಕೊಳ್ಳವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಚುನಾವಣೆ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅನ್ವಯ ಸೂಕ್ತ ಕಾನುನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts