More

    ಮನೆ ಮನೆಗೆ ತೆರಳಿ ಮತದಾನ ಜಾಗೃತಿ

    ರಾಯಚೂರು: ತಾಲೂಕಿನ ದೇವಸುಗೂರು ಗ್ರಾಮದಲ್ಲಿ ಜಿಲ್ಲಾ ಸ್ಪೀಪ್ ಸಮಿತಿಯಿಂದ ಭಾನುವಾರ ಮತಗಟ್ಟೆಯಲ್ಲಿ ಧ್ವಜಾರೋಹಣ, ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಚೀಟಿ ವಿತರಣೆ ಜತೆಗೆ ಮಕ್ಕಳಿಂದ ಮತದಾನದ ಕುರಿತು ಜಾಗೃತಿ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
    ಚುನಾವಣೆ ಸಾಮಾನ್ಯ ವೀಕ್ಷಕ ಅಜಯ್ ಪ್ರಕಾಶ ಮತಗಟ್ಟೆಯ ಮುಂದೆ ಧ್ವಜಾರೋಹಣ ನೆರವೇರಿಸಿದ ನಂತರ ಡೊಳ್ಳು ಕುಣಿತ, ವೀರಗಾಸೆ, ಎತ್ತಿನ ಬಂಡಿಗಳ ಮೆರವಣಿಗೆಯೊಂದಿಗೆ ಗ್ರಾಮದ ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಚೀಟಿ ವಿತರಣೆ ಮಾಡಲಾಯಿತು.
    ಮತದಾರರಿಗೆ ಪ್ರತಿಜ್ಞಾ ವಿ ಬೋಸುವುದರ ಜತೆಗೆ ಸಖಿ ಮತಗಟ್ಟೆ, ಮತಗಟ್ಟೆಗಳಲ್ಲಿ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು. ನಂತರ ಮಕ್ಕಳಿಂದ ಮತದಾನ ಜಾಗೃತಿ ನಾಟಕ ಪ್ರದರ್ಶನ ಜರುಗಿತು.
    ಈ ಸಂದರ್ಭದಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ತಾ.ಪಂ. ಇಒ ಮಾನಪ್ಪ ಕಟ್ಟಿಮನಿ, ಡಿಡಿಪಿಐ ಕೆ.ಡಿ.ಬಡಿಗೇರ, ಸ್ವೀಪ್ ಸಮಿತಿ ನೋಡಲ್ ಅಕಾರಿ ಡಾ.ಬಿ.ವೈ.ವಾಲ್ಮೀಕಿ, ಬಿಇಒ ಚಂದ್ರಶೇಖರ ಭಂಡಾರಿ, ದಂಡಪ್ಪ ಬಿರಾದರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts