ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಸಹಿತ ಆಯೋಜಕರ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಸಂಪ್ಯ ಠಾಣೆಗೆ ದೂರು ನೀಡಿದ್ದಾರೆ. ಅ.೨೦ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ಆಯೋಜಿಸಲಾದ ದೀಪೋತ್ಸವದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸುವಂತೆ ಹಾಗೂ ಗರ್ಭಿಣಿಯರ ವಿರುದ್ಧ ಹಿಂಸೆಗೆ ಪ್ರೇರೇಪಿಸುವಿಕೆ, ಧರ್ಮಗಳ ನಡುವೆ ದ್ವೇಷ ಮೂಡಿಸುವಂತೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.