Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News

ತಾಲೂಕಿಗೊಂದು ಕೈಗಾರಿಕಾ ಘಟಕ

Saturday, 07.07.2018, 3:05 AM       No Comments

ಮಾನ್ಯರೇ,

ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್​ನಲ್ಲಿ ಕೃಷಿ ಸೇರಿ ಕಡೆಗಣಿಸಲ್ಪಟ್ಟ ವಿವಿಧ ವಲಯಕ್ಕೆ ಪ್ರಾಶಸ್ಱ ನೀಡಿದ್ದು ಮೆಚ್ಚುವಂತಹದ್ದು. ಆದರೆ, ಕೈಗಾರಿಕಾ ವಲಯಕ್ಕೆ ಸಿಗಬೇಕಾದ ಅನುದಾನ ಸಿಕ್ಕಿಲ್ಲ. ಒಂದು ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆಯಾದರೆ ಸಾವಿರಾರು ಜನರಿಗೆ ಉದ್ಯೋಗ ದೊರೆಯುತ್ತದೆ. ಹೀಗಾಗಿ ತಾಲೂಕು ಮಟ್ಟದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಸದ್ಯ ಗ್ರಾಮೀಣ ಭಾಗದ ಯುವಕ-ಯುವತಿಯರು ಉದ್ಯೋಗ ಸಿಗದೆ, ನಗರ ಪ್ರದೇಶಕ್ಕೆ ವಲಸೆ ಹೋಗುತ್ತಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಯಾವುದೇ ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಘಟಕಗಳಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಚಿಂತಿಸಿ, ಕ್ರಮ ಕೈಗೊಳ್ಳಬೇಕಾಗಿದೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಐತಿಹಾಸಿಕವಾಗಿ ಸಂಪನ್ನವಾಗಿದ್ದರೂ ನೀರಾವರಿ ಕೈಗಾರಿಕೆ ಸೇರಿ ರೈಲು ಸಂಪರ್ಕದಿಂದಲೂ ವಂಚಿತವಾಗಿದೆ. ಬೃಹತ್ ಕೈಗಾರಿಕೆಯ ಅವಶ್ಯಕತೆ ಇದೆ.

| ಮಹಾಂತೇಶ ರಾಜಗೋಳಿ ಬೈಲಹೊಂಗಲ

Leave a Reply

Your email address will not be published. Required fields are marked *

Back To Top