More

    ಬಿರುಬೇಸಿಗೆ ಶುರು: ಬಿಸಿಗಾಳಿಯಿಂದ ರಕ್ಷಿಸಿಕೊಳ್ಳಲು ಏನು ಮಾಡ್ಬೇಕು? ಮಾಡಬಾರದು? ಇಲ್ಲಿದೆ ಉಪಯುಕ್ತ ಮಾಹಿತಿ

    ಬೆಂಗಳೂರು: ಚಳಿಗಾಲ ಮುಗಿದು ಬಿರು ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ರಾಜ್ಯದ ಜನತೆಗೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ. ಅತಿಯಾದ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯಕ್ಕೆ ತುತ್ತಾಗುವ ಸಂಭವ ಇರುತ್ತದೆ. ಇದರಿಂದ ಪಾರಾಗಬೇಕಾದರೆ ಅಗತ್ಯ ಕ್ರಮಗಳನ್ನು ವಹಿಸಬೇಕಾಗಿದೆ. ಹೀಗಾಗಿ ಏನು ಮಾಡಬೇಕೆಂಬುದನ್ನು ಆರೋಗ್ಯ ಇಲಾಖೆ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.

    ಆರೋಗ್ಯ ಇಲಾಖೆಯ ಮಾರ್ಗಸೂಚಿ ಈ ಕೆಳಕಂಡಂತಿದೆ.

    ಏನು ಮಾಡಬೇಕು?
    1. ಹೆಚ್ಚು ನೀರು ಕುಡಿಯುವುದು
    ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಆಗಾಗ್ಗೆ ಸೇವಿಸಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲೂ ನೀರನ್ನು ಕುಡಿಯಲು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಮೌಖಿಕ ಪುನರ್ಜಲೀಕರಣ ದ್ರಾವಣ (Oral Rehydration Solution – ORS ) ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ/ಲಸ್ಸಿ, ಹಣ್ಣಿನ ಜ್ಯೂಸ್​ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮವಾಗಿದೆ. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತಕಾಯಿ, ಲೆಟೂಸ್ ಹಾಗೂ ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.

    ಇದನ್ನೂ ಓದಿ: ನಿನಗೋಸ್ಕರ ಯಾವ ಮಟ್ಟಕ್ಕಾದ್ರೂ ಹೋಗ್ತೀನಿ… I Love You ಜಾಕ್ವೆಲಿನ್​ ಎಂದ ಮಹಾವಂಚಕ ಸುಕೇಶ್​

    2. ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು
    ಬೇಸಿಗೆಯಲ್ಲಿ ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್​, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಬಹುದಾಗಿದೆ. ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ/ಚಪ್ಪಲಿ ಅಥವಾ ಶೂಗಳನ್ನು ಧರಿಸಬೇಕು.

    3. ಸದಾ ಎಚ್ಚರದಿಂದಿರಿ
    ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆಯಬೇಕು. ಹವಾಮಾನದ ಇತ್ತೀಚಿನ ಮಾಹಿತಿಗಾಗಿ ಭಾರತದ ಹವಾಮಾನ ಇಲಾಖೆ (India Meteorological Department IMD)ಯ ವೆಬ್​ಸೈಟ್​ https://mausam.imd.gov.in ನಲ್ಲಿ ಮಾಹಿತಿಯನ್ನು ಪಡೆಯಬಹುದು.

    4. ಸಾಧ್ಯವಾದಷ್ಟು ಒಳಾಂಗಣದಲ್ಲಿರಿ
    ಎಷ್ಟು ಸಾಧ್ಯವೋ ಅಷ್ಟು ಉತ್ತಮ ಗಾಳಿ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು, ಹಗಲು ಹೊತ್ತಿನಲ್ಲ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿಡಿ ಹಾಗೂ ತಣ್ಣನೆಯ ಗಾಳಿಯ ಸಂಚಾರಕ್ಕೆ ಅನುಕೂಲವಾಗುವಂತೆ, ರಾತ್ರಿಯ ಹೊತ್ತು ಕಿಟಕಿಗಳನ್ನು ತೆರೆದಿಡಬೇಕು. ಹೊರಾಂಗಣ ಚಟುವಟಿಕೆಗಳನ್ನು ಆದಷ್ಟೂ ದಿನದ ತಣ್ಣನೆಯ ಸಮಯದಲ್ಲಿ ಅಂದರೆ, ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ.

    ಬಿಸಿ ಗಾಳಿಯ ಒತ್ತಡ ಹಾಗೂ ಬಿಸಿ ಗಾಳಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳಿಂದ ಎಲ್ಲರಿಗೂ ಅಪಾಯವಿದೆ. ಆದರೆ, ಈ ಕೆಳಕಾಣಿಸಿದ ಗುಂಪಿನ ಜನರಿಗೆ ಹೆಚ್ಚು ಅಪಾಯವಿರುವ ಹಿನ್ನೆಯಲ್ಲಿ ಹೆಚ್ಚುವರಿ ಗಮನವನ್ನು ನೀಡುವುದು ಅಗತ್ಯವಾಗಿದೆ.
    * ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು
    * ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು
    * ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು
    * ಆರೋಗ್ಯ ಸಮಸ್ಯೆಗಳರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು.
    * ತಂಪಾದ ವಾತಾವರಣವಿರುವ ಪ್ರದೇಶದಿಂದ ಬಿಸಿಯಾದ ವಾತಾವರಣದ ಪ್ರದೇಶಕ್ಕೆ ಭೇಟಿ ನೀಡುವ ಜನರು: ಬಿಸಿ ಗಾಳಿಯ ಸಂದರ್ಭದಲ್ಲಿ ಸುಮಾರು ಒಂದು ವಾರದ ಅವಧಿಯನ್ನು ಹೊಸ ವಾತಾವರಣಕ್ಕೆ ಒಗ್ಗಿಕೊಳ್ಳಲು (acclimatized) ಮೀಸಲಿಡಬೇಕು ಹಾಗೂ ಈ ಅವಧಿಯಲ್ಲ ಹೆಚ್ಚು ನೀರನ್ನು ಸೇವಿಸಬೇಕು. ಹಂತ ಹಂತವಾಗಿ ಬಿಸಿಯಾದ ವಾತಾವರಣದಲ್ಲಿ ಚಟುವಟಿಕೆಗಳನ್ನು ನಡೆಸುವುದರಿಂದ ಒಗ್ಗಿಕೊಳ್ಳಲು ಸಾಧ್ಯವಾಗುತ್ತದೆ.

    ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ಅಕ್ರಮ ತಡೆಗೆ ಐರಿಸ್ ಸ್ಕ್ಯಾನರ್​: ಕಡಿಮೆ ಪಡಿತರ ಕೊಟ್ಟರೆ ಸೈರನ್ ಕೂಗುವ ಯಂತ್ರ

    ಇತರ ಮುನ್ನೆಚ್ಚರಿಕಾ ಕ್ರಮಗಳು
    • ಪ್ರತ್ಯೇಕವಾಗಿ ವಾಸಿಸುವ ವೃದ್ಧರು ಅಥವಾ ರೋಗಿಗಳ ಉಸ್ತುವಾರಿ ಹಾಗೂ ಅವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ದೈನಂದಿನವಾಗಿ ಕೈಗೊಳ್ಳಬೇಕು.
    * ಮನೆಯ ಒಳಾಂಗಣವನ್ನು ತಣ್ಣಗಿರಿಸಲು ಪರದೆಗಳು/ಷಟರ್​ಗಳನ್ನು ಬಳಸಿ ಹಾಗೂ ರಾತ್ರಿಯ ಸಮಯದಲ್ಲಿ ಕಿಟಕಿಗಳನ್ನು ತೆರೆದಿಡಿ.
    * ಹಗಲು ಹೊತ್ತಿನಲ್ಲ ಮನೆಯ ಕೆಳಗಿನ ಮಹಡಿಗಳಲ್ಲಿರುವುದು ಉತ್ತಮ.
    * ಶರೀರವನ್ನು ತಣ್ಣಗಿಡಲು ಫ್ಯಾನ್ ಅಥವಾ ತೇವವಾದ ಬಟ್ಟೆಯನ್ನು ಬಳಸಬಹುದು.

    ಏನು ಮಾಡಬಾರದ್ದು
    * ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
    *ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು.
    * ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
    * ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ, ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
    * ಮಧ್ಯಪಾನ, ಟೀ , ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ, ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
    * ಹೆಚ್ಚು ಪ್ರೋಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
    * ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ, ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅಪಾಯಕಾರಿಯಾಗಬಹುದು.

    ಮಾಲೀಕರು ಹಾಗೂ ಕೆಲಸಗಾರರಿಗೆ
    * ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಪ್ರತಿ 20 ನಿಮಿಷಗಳಗೊಮ್ಮೆ ಒಂದು ಗ್ಲಾಸ್ ಅಥವಾ ಅದಕ್ಕಿಂತ ಹೆಚ್ಚು ನೀರು ಕುಡಿಯುವಂತೆ ಗಮನವಹಿಸಬೇಕು.
    * ಕೆಲಸಗಾರರು ನೇರವಾದ ಸೂರ್ಯವಾದ ಬೆಳಕಿನಲ್ಲಿ ಕೆಲಸ ನಿರ್ವಹಿಸದಂತೆ ಎಚ್ಚರ ವಹಿಸಬೇಕು.
    * ಕೆಲಸಗಾರರಿಗೆ ನೆರಳಿನಲ್ಲ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ, ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಬಹುದು.
    * ಶ್ರಮದಾಯಕ ಹಾಗೂ ಹೊರಾಂಗಣ ಚಟುವಟಿಕೆಗಳನ್ನು, ತಾಪಮಾನವು ಕಡಿಮೆ ಇರುವ ಸಮಯದಲ್ಲಿ ಅಂದರೆ, ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವಂತೆ ವೇಳಾಪಟ್ಟಿಯನ್ನು ಸಿದ್ಧಗೊಳಸಬೇಕು.
    * ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ ಕೆಲಸಗಾರರಿಗೆ ಪ್ರತಿ 1 ಗಂಟೆಗೆ 5 ನಿಮಿಷಗಳ ಬಿಡುವನ್ನು ನೀಡಬೇಕು.
    * ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆಯಬೇಕು. ಹವಾಮಾನದ ಇತ್ತೀಚಿನ ಮಾಹಿತಿಗಾಗಿ ಭಾರತದ ಹವಾಮಾನ ಇಲಾಖೆ (India Meteorological Department IMD) ಯ ವೆಬ್​ಸೈಟ್​ https://mausam.imd.gov.in ದಲ್ಲಿ ಮಾಹಿತಿಯನ್ನು ಪಡೆಯಬಹುದು.
    * ಹೆಚ್ಚುವರಿ ಕೆಲಸಗಾರನ್ನು ನೇಮಿಸಿಕೊಳ್ಳಿ ಅಥವಾ ಕೆಲಸದ ಗತಿಯನ್ನು ಕಡಿಮೆಗೊಳಿಸಿ.
    * ಬದಲಾಗಿರುವ ಹವಾಮಾನಕ್ಕೆ ಎಲ್ಲರೂ ಒಗ್ಗಿಕೊಂಡಿರುವುದನ್ನು ಖಚಿತಪಡಿಸಿಕೊಳ್ಳಿ: ಸಾಮಾನ್ಯವಾಗಿ ಹೆಚ್ಚಿನ ಉಷ್ಣತೆಗೆ ಹೊಂದಿಕೊಳ್ಳಲು ಒಂದು ವಾರ ಅವಧಿಯ ಅವಶ್ಯಕತೆ ಇರುತ್ತದೆ. ಆದ್ದರಿಂದ, ಮೊದಲ ವಾರದಲ್ಲಿ ಪ್ರತಿ ದಿನ 3 ಗಂಟೆಗಳಗಿಂತ ಹೆಚ್ಚು ಕೆಲಸ ಮಾಡಬಾರದು. ನಂತರ ಕೆಲಸದ ಅವಧಿಯನ್ನು ಹಂತ ಹಂತವಾಗಿ ಹೆಚ್ಚಿಸಬಹುದು.
    * ಬಿಸಿಯಾದ ಗಾಳಿ ಹಾಗೂ ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಲಕ್ಷಣಗಳನ್ನು ಗುರುತಿಸುವಂತೆ ಕೆಲಸಗಾರರಿಗೆ ತರಬೇತಿ ನೀಡಬೇಕು. ವ್ಯಕ್ತಿಗೆ ತನ್ನ ಲಕ್ಷಣಗಳನ್ನು ಗುರುತಿಸಲು ಸಾಧ್ಯವಾಗದೇ ಇರುವ ಸಂದರ್ಭಗಳು ಹೆಚ್ಚಿರುವುದರಿಂದ ಜೊತೆಯಲ್ಲಿನ ಕೆಲಸಗಾರರು ಲಕ್ಷಣಗಳನ್ನು ಪತ್ತೆ ಹಚ್ಚಲು ಅನುಕೂಲವಾಗುವಂತೆ “buddy system” ಅನ್ನು ಪ್ರಾರಂಭಿಸಬೇಕು.
    * ಪ್ರಥಮ ಚಿಕಿತ್ಸೆಯನ್ನು ನೀಡಲು ತರಬೇತಿ ಹೊಂದಿರುವವರು ಲಭ್ಯವಿರಬೇಕು ಹಾಗೂ ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಆರೋಗ್ಯ ಸಮಸ್ಯೆಗಳು ಉಂಟಾದ ಸಂದರ್ಭದಲ್ಲಿ ಸ್ಪಂದಿಸಲು ತುರ್ತು ಪ್ರತಿಕ್ರಿಯಾ ಯೋಜನೆಯು ಕೆಲಸದ ಸ್ಥಳದಲ್ಲಿ ಲಭ್ಯವಿರಬೇಕು.
    * ಗರ್ಭಿಣಿಯರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ನಿಗದಿತ ಆರೋಗ್ಯ ಸಮಸ್ಯೆಗೆ ಔಷಧೋಪಚಾರವನ್ನು ಪಡೆಯುತ್ತಿರುವವರು ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಮುನ್ನ ತಮ್ಮ ವೈದ್ಯರ ಸಲಹೆಯನ್ನು ಪಡೆಯುವುದು ಅಗತ್ಯವಾಗಿದೆ.
    * ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು ತಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಪ್ಯಾಂಟ್ ಧರಿಸಬೇಕು ಹಾಗೂ ಸೂರ್ಯನ ಶಾಖದಿಂದ ರಕ್ಷಿಸಿಕೊಳ್ಳಲು ತಲೆಯ ಭಾಗವನ್ನು ಮುಚ್ಚಿಕೊಳ್ಳಬೇಕು.
    * ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಕೆಲಸಗಾರರಲ್ಲಿ ಅರಿವು ಮೂಡಿಸಲು ಶಿಬಿರಗಳನ್ನು ಆಯೋಜಿಸಬೇಕು.
    * ತಾಪಮಾನ ಹಾಗೂ ಮುನ್ಸೂಚನೆ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನು ಕೆಲಸದ ಸ್ಥಳಗಳಲ್ಲಿ ಅಳವಡಿಸಬೇಕು.
    * ಬಿಸಿಗಾಳಿ ಮತ್ತು ಉಷ್ಣತೆಯ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸಲು ಹಾಗೂ ಅವುಗಳಿಂದ ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಲೀಕರು ಹಾಗೂ ಕೆಲಸಗಾರರಿಗೆ ಕರಪತ್ರಗಳನ್ನು ವಿತರಿಸುವುದು ಮತ್ತು ಶಿಬಿರಗಳನ್ನು ಆಯೋಜಿಸಬೇಕು.

    ಇದನ್ನೂ ಓದಿ: ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನ ಹತ್ಯೆ​ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ಬರೀ ಲೈಂಗಿಕ ಕ್ರಿಯೆಯದ್ದೇ ಉಲ್ಲೇಖ

    ಎಚ್ಚರವಿರಲಿ: ಅತಿಯಾದ ಶಾಖದಿಂದ ಈ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು
    * ತಲೆ ಸುತ್ತುವುದು/ ಪ್ರಜ್ಞೆ ತಪ್ಪುವುದು
    * ವಾಕರಿಕೆ ಅಥವಾ ವಾಂತಿಯಾಗುವುದು
    * ಅತಿಯಾದ ಬಾಯಾರಿಕೆ
    * ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ
    * ಏರುಗತಿಯ ಉಸಿರಾಟ ಹಾಗೂ ಹೃದಯದ ಬಡಿತ

    ಅತಿಯಾದ ಉಷ್ಣತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು
    ನಿಮಗೆ ಅಥವಾ ಇನ್ನಾರಿಗಾದರೂ ಅತಿಯಾದ ಉಷ್ಣತೆಯಿಂದ ಮೇಲೆ ತಿಳಿಸಿದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿದ್ದಾರೆ. ತಕ್ಷಣವೇ ತುಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿರಿ. ನೀರಿನ ಸಹಾಯವನ್ನು ಪಡೆಯಿರಿ ಹಾಗೂ ತಕ್ಷಣವೇ ಸಹಾಯ ಮತ್ತು ವ್ಯದ್ಯಕೀಯ ನೆರವನ್ನು ಪಡೆಯಿರಿ. ಒಮ್ಮೆ ದೇಹದ ಉಷ್ಣಾಂಶವನ್ನು ಪರೀಕ್ಷಿಸಿಕೊಳ್ಳಿ.

    ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನ ಹತ್ಯೆ​ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ಬರೀ ಲೈಂಗಿಕ ಕ್ರಿಯೆಯದ್ದೇ ಉಲ್ಲೇಖ

    ನಿನಗೋಸ್ಕರ ಯಾವ ಮಟ್ಟಕ್ಕಾದ್ರೂ ಹೋಗ್ತೀನಿ… I Love You ಜಾಕ್ವೆಲಿನ್​ ಎಂದ ಮಹಾವಂಚಕ ಸುಕೇಶ್​

    ತಂದೆಯಿಂದಲೇ ಲೈಂಗಿಕ ದೌರ್ಜನ್ಯ: ಬಾಲ್ಯದ ಕಹಿ ಘಟನೆಯನ್ನು ಬಿಚ್ಚಿಟ್ಟ ಖುಷ್ಬೂ ಸುಂದರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts