

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಸಾರ್ವಜನಿಕವಾಗಿ ದೀಪಾವಳಿಯನ್ನು ದೋಸೆ ಹಬ್ಬದ ಮೂಲಕ ಆಚರಿಸಬಹುದು ಎಂಬುದನ್ನು ಬೆಳ್ತಂಗಡಿಯ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮಾಡಿ ತೋರಿಸಿದ್ದಾರೆ. ದೋಸೆ ಹಬ್ಬದಿಂದ ಹಿಂದು ಸಮಾಜವನ್ನು ಒಗ್ಗೂಡಿಸುವ ಹಾಗೂ ನಮ್ಮ ಸಂಸ್ಕೃತಿ ಉಳಿಸುವ ಕಾರ್ಯವಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ದೋಸೆ ಹಬ್ಬದಲ್ಲಿ ಮಾತನಾಡಿದರು.
ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ದೋಸೆ ಹಬ್ಬಕ್ಕೆ ಚಾಲನೆ ನೀಡಿದರು. ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಸಂದೀಪ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅನಿನಾಶ್ ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ನಪಂ ಅಧ್ಯಕ್ಷ ಜಯಾನಂದ ಗೌಡ, ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ವಿನಿತ್ ಕೋಟ್ಯಾನ್, ಗಣೇಶ್ ಲಾಲ, ಜಯಪ್ರಕಾಶ್ ಕಡಮಾಜೆ, ಗಣೇಶ್ ಗೌಡ, ಸೀತಾರಾಮ ಬೆಳಾಲ್, ಶರತ್ ಕುಮಾರ್ ಶೆಟ್ಟಿ ಮೊದಲಾದವರಿದ್ದರು. ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು. ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ವಂದಿಸಿದರು.
ನಮೋ ಮ್ಯಾರಾಥಾನ್
ಪ್ರಧಾನಿ ನರೇಂದ್ರ ಮೋದಿ 75ನೇ ಹುಟ್ಟು ಹಬ್ಬ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂದ ಶತಮಾನೋತ್ಸವ ಆಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ವಾಣಿ ಶಿಕ್ಷಣ ಸಂಸ್ಥೆಗಳ ಬಳಿಯಿಂದ ನಮೋ ಮ್ಯಾರಾಥಾನ್ ಅದ್ದೂರಿಯಾಗಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ, ಮಕ್ಕಳ ಹುಲಿವೇಷ ಸ್ಪರ್ಧೆ ಬಾಲೆ ಪಿಲಿ, ಸಂಜೆ 6ರ ಗೋಧೋಳಿ ಮುಹೂರ್ತದಲ್ಲಿ ಗೋ ಪೂಜಾ ಉತ್ಸವ, ದೀಪ ಪ್ರಜ್ವಲನೆ ಹಾಗೂ ರಾತ್ರಿ ಭಜರಂಗ ಬಲಿ ನಾಟಕ ಪ್ರದರ್ಶನ ನಡೆಯಿತು.