ಸಿಎಂ ಸಿದ್ದರಾಮಯ್ಯ ವಿರುದ್ಧ ದೋಸ್ತಿ ಪಿತೂರಿ

ಜಿಲ್ಲಾ ಕಾಂಗ್ರೆಸ್​, ಹಿಂದುಳಿದ ವರ್ಗದಿಂದ ಆರೋಪ, ಕೋಲಾರ ಹೊಸ ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ

ಕೋಲಾರ: ರಾಜ್ಯ ಕಾಂಗ್ರೆಸ್​ ಸರ್ಕಾರದ ಜನಪ್ರಿಯತೆ ಸಹಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್​ ಮತ್ತು ಹಿಂದುಳಿದ ವರ್ಗದಿಂದ ಸೋಮವಾರ ನಗರದ ಹೊಸ ಬಸ್​ ನಿಲ್ದಾಣದಲ್ಲಿ
ಪ್ರತಿಭಟನೆ ನಡೆಸಿತು.
ವಿಧಾನ ಪರಿಷತ್​ ಸದಸ್ಯ ಎಂ.ಎಲ್​. ಅನಿಲ್​ಕುಮಾರ್​ ಮಾತನಾಡಿ, ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ 136 ಶಾಸಕರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್​ ಮುಂದಾಗಿವೆ. ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್​ ಷಾ ಅವರ ಅಣತಿಯಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆ. ಯಾವುದೇ ತನಿಖಾ ತಂಡಕ್ಕೆ ದೂರು ಬಂದಿಲ್ಲ, ಆದರೆ ಯಾರೋ ಒಬ್ಬ ಸಾಮಾನ್ಯ ವ್ಯಕ್ತಿ ದೂರು ಕೊಟ್ಟ ಕೆಲವೇ ಗಂಟೆಗಳಲ್ಲಿ ಸಿಎಂಗೆ ನೋಟಿಸ್​ ಕೊಡುತ್ತಾರೆ ಎಂದರೆ ರಾಜ್ಯಪಾಲರು ಯಾರ ಪರವಾಗಿದ್ದಾರೆ ಎಂಬುದು ಅರ್ಥವಾಗುತ್ತದೆ. ಹಿಂದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಕಾಂಗ್ರೆಸ್​ ಕೊಟ್ಟ ದೂರುಗಳಿಗೆ ಏಕೆ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿನ ಮುಡಾ ಮತ್ತು ವಾಲ್ಮೀಕಿ ಪ್ರಕರಣದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್​ನವರು ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕೊಟ್ಟಿಲ್ಲ. ಬಿಜೆಪಿಯಿಂದ ಅಧಿಕಾರ ಕೈತಪ್ಪಿ ಹೋದ ಕಡೆಗಳಲ್ಲಿ ವಾಮಮಾರ್ಗದ ಮೂಲಕ ಅಧಿಕಾರ ಪಡೆಯುವ ಯತ್ನ ನಡೆಸಲು ಹೊರಟಿದ್ದಾರೆ ಎಂದರು.
ಬಿಜೆಪಿ ವಿರುದ್ಧ ಧ್ವನಿ ಎತ್ತಿದರೆ ಅವರ ವಿರುದ್ಧ ಪಿತೂರಿ ನಡೆಸಿ ಪ್ರಕರಣ ದಾಖಲಿಸುವ ಪ್ರವೃತ್ತಿ ಹೊಂದಿರುವ ಕೇಂದ್ರ ಸರ್ಕಾರ, ಸಿದ್ದರಾಮಯ್ಯ ವಿರುದ್ಧ ಇಡಿ, ಸಿಬಿಐ ದುರ್ಬಳಕೆ ಮಾಡಿಕೊಂಡು ಹತ್ತಿಕ್ಕುವ ಪ್ರಯತ್ನ ನಡಸುತ್ತಿದೆ ಎಂದರು.
ಮುಡಾದಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲದ ಪ್ರಕರಣವನ್ನು ಬಳಸಿಕೊಂಡು ಸಿದ್ದರಾಮಯ್ಯ ಅವರನ್ನು ಹತ್ತಿಕ್ಕಲು ಮುಂದಾಗಿರುವ ಕೇಂದ್ರ ಸರ್ಕಾರದ ಅಣತಿಯಂತೆ ಹಮ್ಮಿಕೊಂಡಿರುವ ಮೈಸೂರು ಪಾದಯಾತ್ರೆ ಆಂದೋಲನವು ಅರ್ಥಹೀನ ಎಂದರು.
ಕಾಂಗ್ರೆಸ್​ ಮುಖಂಡ ಕೆ.ವಿ ಗೌತಮ್​ ಮಾತನಾಡಿ, ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳಲು ಮುಂದಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಬೆಳವಣಿಗೆ. ಹಿಂದುಳಿದವರು ಯಾವುದೇ ಕಾರಣಕ್ಕೂ ಅಧಿಕಾರದಲ್ಲಿ ಇರಬಾರದು ಎಂದು ಬಿಜೆಪಿ&ಜೆಡಿಎಸ್​ ನಾಯಕರು ಹೀನ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಮೂರು ಬಾರಿ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ದಣ ಭಾರತದಲ್ಲಿ ಅಧಿಕಾರ ಹಿಡಿಯಲು ಅವಕಾಶವಿರುವ ಕರ್ನಾಟಕದಲ್ಲಿ ಅಧಿಕಾರ ಸಿಗಲಿಲ್ಲ, ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕು ಎಂಬ ಉದ್ದೇಶದಿಂದ ಸುಳ್ಳು ಆರೋಪವನ್ನು ಮುಖ್ಯಮಂತ್ರಿ ಮೇಲೆ ಮಾಡಲಾಗುತ್ತಿದೆ. ಅವರ ಹೆಸರಿಗೆ ಮಸಿ ಬಳಿಯಲು ನಾವು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪಿಎಲ್​ಡಿ ಬ್ಯಾಂಕ್​ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್​, ಮುಖಂಡರಾದ ಅಂಜನಿ ಸೋಮಣ್ಣ, ಅಂಬರೀಷ್​, ಕೆ.ಜಯದೇವ್​, ಒಬಿಸಿ ಮಂಜುನಾಥ್​, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್​ ಕುಮಾರ್​, ರತ್ನಮ್ಮ ಇದ್ದರು.

Share This Article

ನಿಮ್ಮ ಅಂಗೈನಲ್ಲಿ ಈ ರೀತಿ ತ್ರಿಕೋನ ಚಿಹ್ನೆ ಇದೆಯಾ? ಇದ್ರೆ ಏನಾಗುತ್ತೆ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..

ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…

ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್​ ಎಂದು ಬಿಸಾಡೋ ಬದಲು ಹೀಗೆ ಮಾಡಿ

ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…