ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ

Gadag Murder
Published on

ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

ಮೃತರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಎಂದು ಗುರುತಿಸಲಾಗಿದೆ.

Gadag Police

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ  ಬಿ.ಎಸ್. ನೇಮಗೌಡ ಏಪ್ರಿಲ್ 17ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ನಿಗದಿಪಡಿಸುವ ಸಂಬಂಧ ಕೊಪ್ಪಳದಿಂದ ಸಂಬಂಧಿಕರು ಆಗಮಿಸಿದ್ದರು. ತಡರಾತ್ರಿ ಬಾಗಿಲು ಸದ್ದು ಕೇಳಿ ಅನುಮಾನಗೊಂಡ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ಫೋನ್ ಮಾಡ್ತಾ ಇದ್ದಂತೆ ಎಚ್ಚೆತ್ತ ಆರೋಪಿಗಳು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಸ್ಥಳಕ್ಕೆ ಶ್ವಾನದಳ, ಫೋರೆನ್ಸಿಕ್ ಟೀಂ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕುಟುಂಬಸ್ಥರಿಂದ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net