ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಅಗ್ನಿಸಾಕ್ಷಿ ಧಾರಾವಾಹಿ ಸಹನಟನ ವಿರುದ್ಧ ಕೇಸ್​

ಬೆಂಗಳೂರು: ಅಗ್ನಿಸಾಕ್ಷಿ ಧಾರಾವಾಹಿಯ ಸಹನಟ ರಾಜೇಶ್​ ಧ್ರುವ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದ ಅಡಿ ಪ್ರಕರಣ ದಾಖಲಾಗಿದೆ.

ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಅಖಿಲ್​ ಪಾತ್ರ ನಿರ್ವಹಿಸುತ್ತಿರುವ ರಾಜೇಶ್​ ಧ್ರುವ 2017ರಲ್ಲಿ ಶ್ರುತಿ ಎಂಬ ಯುವತಿಯನ್ನು ವಿವಾಹವಾಗಿದ್ದರು. ಇವರು ನಟ ಮುಖ್ಯಮಂತ್ರಿ ಚಂದ್ರು ಅವರ ಮನೆಯಲ್ಲಿ ಬಾಡಿಗೆಗೆ ಇದ್ದರು. ಆದರೆ ರಾಜೇಶ್​ ತನಗೆ ಮದುವೆಯಾಗಿಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದರು. ಜತೆಗೆ ಪತ್ನಿ ಶ್ರುತಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಮತ್ತು ಆಕೆಯನ್ನು ಮನೆಯಿಂದ ಹೊರಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ರಾಜೇಶ್​ ಧ್ರುವ ವಿರುದ್ಧ ಬಸವನಗುಡಿಯ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *