More

    ಡಾ. ಬಸವರಾಜ ಕಲ್ಗುಡಿಗೆ ಅಂಬಿಕಾತನಯದತ್ತ ಪ್ರಶಸ್ತಿ

    ಧಾರವಾಡ: ನಗರದ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಕೊಡಮಾಡುವ `ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿನ ಹಿರಿಯ ವಿಮರ್ಶಕ ಡಾ. ಬಸವರಾಜ ಕಲ್ಗುಡಿ ಆಯ್ಕೆಯಾಗಿದ್ದಾರೆ. ವರಕವಿ ಡಾ. ಬೇಂದ್ರೆಯವರ 128ನೇ ಜನ್ಮದಿನವಾದ ಜ. 31ರಂದು ಸಂಜೆ 4.30ಕ್ಕೆ ಇಲ್ಲಿನ ಡಾ. ದ.ರಾ. ಬೇಂದ್ರೆ ಭವನದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಒಳಗೊಂಡಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts