More

    ಡಾ.ಬಿ.ಆರ್. ಅಂಬೇಡ್ಕರ್ ಜ್ಞಾನದ ಸಂಕೇತ ಆಗಿದ್ದರು

    ಮೈಸೂರು: ಡಾ.ಬಿ.ಆರ್. ಅಂಬೇಡ್ಕರ್ ಜ್ಞಾನದ ಸಂಕೇತ ಆಗಿದ್ದರು ಎಂದು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಪ್ರೊ.ಮನೋರಖ್ಖಿತ ಬಂತೇಜಿ ಬಣ್ಣಿಸಿದರು.

    ನಗರದ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಪಠ್ಯೇತರ ಚಟುವಟಿಕೆಗಳ ಸಮಿತಿಯು ಗುರುವಾರ ಆಯೋಜಿಸಿದ್ದ ‘ವಿಶ್ವಜ್ಞಾನಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್’ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಎಲ್ಲಿ ದೇವರು, ಜಾತಿ, ಧರ್ಮ ಕೆಲಸ ಮಾಡಿದಾಗ ಅಲ್ಲಿ ಪ್ರಜಾಪ್ರಭುತ್ವ ಕೆಲಸ ಮಾಡುವುದಿಲ್ಲ. ಕೋಮುವಾದ, ಜಾತಿವಾದ ಮುಂದಿಟ್ಟು ಅಧಿಕಾರ ಮಾಡಿದರೇ ಪ್ರಜಾಪ್ರಭುತ್ವಕ್ಕೆ ಧಕ್ಕೆ ಆಗುತ್ತದೆ. ಜಾತಿ ಹೆಸರಿನಲ್ಲಿ ಸಿಗುವ ಸೌಲಭ್ಯ ಬಳಸಿಕೊಂಡು ಸಬಲೀಕರಣವಾಗಬೇಕು. ಸಮಾಜದಲ್ಲಿ ಜಾತೀಯತೆಯನ್ನು ಅಳಿಸಿ ಹಾಕಬೇಕು ಎಂದು ಅವರು ಹೇಳಿದರು.

    ರಾಜಪ್ರಭುತ್ವ ಶೋಷಣೆಯ ಅಸ್ತ್ರವಾಗಿತ್ತು. ಪ್ರಜಾಪ್ರಭುತ್ವ ಪ್ರತಿಯೊಬ್ಬರಿಗೂ ಹಕ್ಕು ಕಲ್ಪಿಸಿದೆ. ಪ್ರತಿಯೊಂದು ರಾಷ್ಟ್ರೀಕರಣವಾದಾಗ ಎಲ್ಲರಿಗೂ ಆಸ್ತಿ, ಅಧಿಕಾರ ಹಂಚಿಕೆ ಆಗುತ್ತದೆ ಎಂದು ಅವರು ಹೇಳಿದರು.

    ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ನರೇಂದ್ರಕುಮಾರ್, ಪ್ರಾಂಶುಪಾಲ ಪ್ರೊ.ಎಚ್. ಸೋಮಶೇಖರಪ್ಪ, ಆಡಳಿತಾಧಿಕಾರಿ ಪ್ರೊ.ವಿ.ಷಣ್ಮುಗಂ, ಪಠ್ಯೇತರ ಚಟುವಟಿಕೆಗಳ ಸಮಿತಿಯ ಸಂಚಾಲಕ ಪ್ರೊ.ಸಿ.ಈ.ಲೋಕೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts