More

    ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಮುಂದುವರಿಕೆ!; ಇಲ್ಲಿದೆ ವಿವರ..

    ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾಗಿ ಡಾ. ಸಿ.ಎನ್. ಮಂಜುನಾಥ್ ಅವರೇ ಮುಂದುವರಿಯಲಿದ್ದಾರೆ. ಅವರ ಸೇವಾವಧಿಯನ್ನು ಇನ್ನು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ.

    ಆಸ್ಪತ್ರೆಯ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಅವರ ಅಧಿಕಾರಾವಧಿ ನಾಳೆ (ಜು. 19ಕ್ಕೆ)ಗೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತಳೆಯಲಾಗಿದೆ.

    ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮುಂದಿನ ಆರು ತಿಂಗಳ ಅವಧಿಗೆ ನಿರ್ದೇಶಕರಾಗಿ ಮಂಜುನಾಥ್ ಅವರ ಸೇವಾವಧಿ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಅಧಿಕೃತ ಆದೇಶ ಬಾಕಿ ಇದೆ.

    ಇದನ್ನೂ ಓದಿ: ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

    ಕಲಬುರ್ಗಿ ಯೋಜನೆ: ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅನುದಾನಿತ ಯೋಜನೆಯಡಿ 371 ಹಾಸಿಗೆಗಳ ನೂತನ ಜಯದೇವ ಆಸ್ಪತ್ರೆ ಕಾಮಗಾರಿ ನಡೆಯುತ್ತಿದೆ. ಈ ಯೋಜನೆ ಪೂರ್ಣಗೊಳ್ಳಲು ಇನ್ನೂ ಕೆಲ ತಿಂಗಳುಗಳಾಗಲಿವೆ. ಹೊಸ ಆಸ್ಪತ್ರೆ ಮುಂದಿನ ವರ್ಷದ ಜನವರಿಯೊಳಗೆ ಕಾರ್ಯರೂಪಕ್ಕೆ ಬರಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಸರ್ಕಾರ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿ ವಿಸ್ತರಿಸಿದೆ.

    ಇದನ್ನೂ ಓದಿ: ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ

    ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಸೌಲಭ್ಯವು 130 ಹಾಸಿಗೆಗಳನ್ನು ಹೊಂದಿದೆ ಮತ್ತು ಆ ಪ್ರದೇಶದಲ್ಲಿ ಹೆಚ್ಚುತ್ತಿರುವ ಹೃದಯ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಸಮರ್ಪಕವಾಗಿ ಸಜ್ಜುಗೊಂಡಿಲ್ಲ. ಇದೀಗ ನಿರ್ಮಾಣ ಹಂತದಲ್ಲಿರುವ ಕಲಬುರಗಿ ನೂತನ ಆಸ್ಪತ್ರೆ ಕಾರ್ಯಾರಂಭ ಮಾಡಿದ ನಂತರ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿಯ ಆರು ಜಿಲ್ಲೆಗಳ ಹೃದಯ ರೋಗಿಗಳಿಗೆ ಸೇವೆ ದೊರೆಯಲಿದೆ.

    ಇದನ್ನೂ ಓದಿ: ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?

    ಕಳೆದ ವರ್ಷ 2022ರ ಜುಲೈನಲ್ಲಿ ಅವರ ಸೇವಾವಧಿ ಮುಕ್ತಾಯವಾಗಿತ್ತು. ಆದರೆ ಸಂಸ್ಥೆಯ ಹಲವಾರು ಚುನಾಯಿತ ಪ್ರತಿನಿಧಿಗಳು ಹಾಗೂ ನೌಕರರು ಅವರ ಸೇವಾವಧಿ ವಿಸ್ತರಣೆ ಕೋರಿ ಆಗಿನ ಮುಖ್ಯಮಂತ್ರಿಗೆ ಸಲ್ಲಿಸಿದ್ದ ಮನವಿ ಮೇರೆಗೆ ಒಂದು ವರ್ಷ ವಿಸ್ತರಣೆ ಮಾಡಲಾಗಿತ್ತು.

    ಹೃದಯದ ಕಾಳಜಿ ವಹಿಸಿ; ಪ್ರತಿ ವರ್ಷ ಆರೋಗ್ಯ ತಪಾಸಣೆ ಅಗತ್ಯ..

    ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!

    ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts