More

    ಡಿ.ಕೆ.ಸುರೇಶ್ ವಿರುದ್ಧ ಡಾ.ಮಂಜುನಾಥ್ ಸ್ಪರ್ಧೆ ಫಿಕ್ಸ್?: ಜೆಡಿಎಸ್‌ ಸಭೆಯಲ್ಲಿ ಕುಮಾರಸ್ವಾಮಿ ಹೇಳಿದ್ದೇನು?

    ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯನ್ನಾಗಿ ನಿಲ್ಲಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರ ಒತ್ತಾಸೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದರು.

    ಇದನ್ನೂ ಓದಿ: ತಮಿಳುನಾಡಿನ ಖ್ಯಾತ ನಟ ಅಭಿಮಾನಿಗಳ ಸಂಘದ ಸದಸ್ಯರು ಬಿಜೆಪಿ ಸೇರ್ಪಡೆ!

    ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ನಾಯಕರು, ಮುಖಂಡರು ಅದೇ ಅಭಿಲಾಷೆ ಹೊಂದಿದ್ದಾರೆ. ಎನ್ ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎರಡೂ ಪಕ್ಷಗಳೂ ಬಯಸಿವೆ. ಅವರು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಸಭೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದರು.

    ಸಿ.ಪಿ.ಯೋಗೇಶ್ವರ್ ಅವರು ಎನ್​ಡಿಎ ಅಭ್ಯರ್ಥಿ ಆಗಬೇಕು ಎಂದು ನಾನು ಹೇಳಿದ್ದೇನೆ. ಸ್ವತಃ ಯೋಗೇಶ್ವರ್ ಅವರಿಗೂ ಹೇಳಿದ್ದೇನೆ. ಆದರೆ ಯೋಗೇಶ್ವರ್ ಅವರು ಕೂಡ ಡಾ.ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ ಎಂದು ಕುಮಾರಸ್ವಾಮಿ ಅವರು ಸಭೆಯಲ್ಲಿ ಹೇಳಿದರು.

    hdk

    ಭಾನುವಾರ ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ. ಡಾ.ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ನನ್ನ ಸಹೋದರಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳ್ತಾ ಕೂತಿದ್ದಾರೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ಸಂಸದ ಸುರೇಶ್​ ಅವರನ್ನು ಮಣಿಸಲೇಬೇಕು. ಇದು ನನ್ನ ಗುರಿ ಎಂದು ನೇರವಾಗಿ ಕುಮಾರಸ್ವಾಮಿ ಹೇಳಿದ್ದಾರೆ.

    ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ರಾಮನಗರ ಜನರು ನಿಖಿಲ್ ರನ್ನು ಸೋಲಿಸಿದ್ದಾರೆ ಎಂದು ನಾನು ದೋಷ ಕೊಡಲ್ಲ. ನಮ್ಮದೇ ತಪ್ಪುಗಳಿಂದ ನಿಖಿಲ್ ಸೋತಿದ್ದಾರೆ, ಆ ತಪ್ಪುಗಳನ್ನು ಸರಿ ಮಾಡೋಣ ಎಂದವರು ಅವರು.

    ಡಿಕೆಶಿ ಮೇಲೆ ಕಿಡಿ: ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಕಣ್ಣೀರು ಹಾಕೋದು ಅವರ ಕುಟುಂಬಕ್ಕೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಅವರಿಗೆ ಆತ್ಮಸಾಕ್ಷಿ ಅನ್ನೋದು ಇದೆಯಾ ಎಂದು ಕಿಡಿಕಾರಿದ ಕುಮಾರಸ್ವಾಮಿ ಅವರು ಏನೆಲ್ಲಾ ಮಾಡಿದ್ದಾರೆ, ಏನೆಲ್ಲಾ ಕೆಡುಕು ಮಾಡಿದ್ದಾರೆ ಎನ್ನುವುದು ಈ ರಾಜ್ಯಕ್ಕೆ ಗೊತ್ತಿದೆ ಎಂದು ಡಿಕೆ ಬ್ರದರ್ಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಡೀ ವಿಶ್ವವೇ ಮೋದಿ ಅವರನ್ನು ಗೌರವಿಸುತ್ತದೆ. ಅಂತಹ ಮೋದಿ ಅವರು ದೇವೇಗೌಡರು ಬಂದರೆ ಎಷ್ಟು ಗೌರವ ಕೊಡುತ್ತಾರೆ ಎನ್ನುವುದನ್ನು ಇಡೀ ದೇಶವೇ ನೋಡಿದೆ. ಯಾವ ರೀತಿ ಅವರು ದೇವೆಗೌಡರನ್ನು ಆದರಿಸುತ್ತಾರೆ ಎಂಬುದನ್ನು ಆ ವ್ಯಕ್ತಿ ಅರ್ಥ ಮಾಡಿಕೊಳ್ಳಬೇಕು ಎಂದು ಕೆಂಡ ಕಾರಿದರು.

    ಮಾಗಡಿ ಶಾಸಕ ಬಾಲಕೃಷ್ಣಗೆ ತಿರುಗೇಟು: ನಮ್ಮ ಪಕ್ಷದಿಂದಲೇ ಬೆಳೆದು ಹೋದ ಮಾಗಡಿ ನಾಯಕನ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್ಡಿಕೆ ಅವರು ಗೌಡರ ಮನೆಯಲ್ಲಿ ಅಳಿಯನನ್ನೇ ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದು ಹೇಳಿದ್ದಾರೆ. ಆ ವ್ಯಕ್ತಿಗೆ ಸತ್ಯ ಗೊತ್ತಿಲ್ಲ. ಮಂಜುನಾಥ್ ಅವರು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಲಕ್ಷಾಂತರ ಬಡ ಜನರ ಹೃದಯ ಕಾಪಾಡಿದ್ದಾರೆ. ದೇಶದಲ್ಲಿಯೇ ಅವರ ಸೇವೆಯನ್ನು ಕೊಂಡಾಡುತ್ತಾರೆ. ಅಂತಹ ವ್ಯಕ್ತಿ ದೆಹಲಿಗೆ ಹೋದರೆ ಇಡೀ ದೇಶಕ್ಕೆ ಸೇವೆ ಮಾಡಬಹುದು. ಅವರನ್ನು ಹರಕೆಯ ಕುರಿ ಮಾಡುತ್ತಿಲ್ಲ ನಾವು. ಎಲ್ಲರೂ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

    IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts