More

    ಜೈನಮುನಿಗಳಿಗೆ ಸರ್ಕಾರ ರಕ್ಷಣೆ ನೀಡಲಿ, ಹಂತಕರಿಗೆ ತಕ್ಕ ಶಿಕ್ಷೆಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ

    ಮಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರನ್ನು ಭೀಕರವಾಗಿ ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಜು. 6ರಂದು ನಾಪತ್ತೆಯಾಗಿದ್ದು, ಬಳಿಕ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇಂದು 400 ಅಡಿ ಆಳದ ಕೊಳವೆಬಾವಿಯಲ್ಲಿ ಅವರ ಶವದ 9 ತುಂಡುಗಳನ್ನು ಪತ್ತೆ ಮಾಡಲಾಗಿದೆ.

    ಇದನ್ನೂ ಓದಿ: ಮದುವೆ ವಾರ್ಷಿಕೋತ್ಸವಕ್ಕಾಗಿ ಪತ್ನಿಯನ್ನು ಊರಿನಿಂದ ಕರೆಸಿಕೊಂಡ; ಹೆಂಡತಿ ಬರುವಷ್ಟರಲ್ಲಿ ಹೆಣವಾದ ಗಂಡ!

    ಹಂತಕರು ಜೈನಮುನಿಯನ್ನು ಭೀಕರವಾಗಿ ಕೊಂದು ದೇಹವನ್ನು ತುಂಡರಿಸಿ, ಶವವನ್ನು 9 ತುಂಡುಗಳಾಗಿಸಿ ಕೊಳವೆಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಅವರು ಖಂಡನೆ ವ್ಯಕ್ತಪಡಿಸಿದ್ದು, ಹಂತಕರಿಗೆ ತಕ್ಕ ಶಿಕ್ಷೆ ಆಗಲಿ ಎಂದು ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ನಾಪತ್ತೆಯಾಗಿದ್ದ ಸ್ವಾಮೀಜಿಯ ದೇಹ ಪೀಸ್ ​ಪೀಸ್​; 400 ಅಡಿ ಆಳದ ಬೋರ್​ವೆಲ್​ನಲ್ಲಿ ಶವದ ತುಂಡುಗಳು ಪತ್ತೆ

    ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ. ಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಕೃತ್ಯ ಎಸಗಿದವರ ಬಂಧನ ಆಗಿರುವುದು ತಿಳಿದು ಬಂದಿದೆ. ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿರುವ ಅವರು, ಜೈನಮುನಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂಬುದಾಗಿಯೂ ಹೇಳಿದ್ದಾರೆ.

    ಕಾಮಕುಮಾರ ಸ್ವಾಮೀಜಿಯ ಭೀಕರ ಕೊಲೆ; ತಲೆ ಇಬ್ಭಾಗ, ಕೈ-ಕಾಲುಗಳೂ ಕಟ್, ಶವ 9 ತುಂಡು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts