

ಶಿವಮೊಗ್ಗ: ಒಂದು ಸಾವಿರ ಕರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ ನೀಡಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮೂರ್ನಾಲ್ಕು ದಿನದಲ್ಲಿ ಅನುಮತಿ ಸಿಗುವ ಸಾಧ್ಯತೆ ಇದೆ ಎಂದು ಆಯುರ್ವೇದ ತಜ್ಞ ಡಾ. ಗಿರಿಧರ ಕಜೆ ಹೇಳಿದರು.
ನಗರದಲ್ಲಿ ಬುಧವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಈಗಾಗಲೇ 10 ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ ನೀಡಿ ಯಶಸ್ವಿಯಾಗಿದ್ದೇವೆ. ಮಧುಮೇಹ, ಟಿಬಿ, ಅಧಿಕ ರಕ್ತದೊತ್ತಡ ಸೇರಿ ಹಲವು ಲಕ್ಷಣ ಹೊಂದಿದ್ದ 23ರಿಂದ 65 ವರ್ಷದೊಳಗಿನ 10 ಸೋಂಕಿತರು ಗುಣಮುಖವಾಗಿದ್ದಾರೆ. ಇದು ಪ್ರಾಥಮಿಕ ಯಶಸ್ಸು ಅಷ್ಟೆ. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಚಿಕಿತ್ಸೆಯನ್ನು ಎದುರು ನೋಡುತ್ತಿದ್ದೇವೆ ಎಂದರು.
ಹೊರ ರಾಜ್ಯ ಅಥವಾ ಜಿಲ್ಲೆಗಳಿಂದ ಬಂದವರಿಗಿಂತ ಪ್ರಾಥಮಿಕ ಸಂಪರ್ಕದಿಂದ ವೇಗವಾಗಿ ಹರಡುತ್ತಿರುವ ಸೋಂಕನ್ನು ನಿಯಂತ್ರಿಸಬೇಕಿದೆ. ಹಾಗಾಗಿ ದೊಡ್ಡ ಮಟ್ಟದಲ್ಲಿ ಸ್ಯಾಂಪಲ್ಸ್ಗೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕರೊನಾ ಸೋಂಕಿತರಿಗೆ ಆಯುರ್ವೇದ ತಜ್ಞ ಡಾ. ಗಿರಿಧರ್ ಕಜೆ ಅವರು ಸಂಶೋಧಿಸಿದ ಔಷಧ ಕೊಡಿಸುವ ಬಗ್ಗೆ ಪ್ರಯತ್ನಿಸಲಾಗುವುದು. ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಚರ್ಚಿಸುವೆ ಎಂದರು.