More

    ಸೌಜನ್ಯಾ ಪ್ರಕರಣ ಬಳಸಿಕೊಂಡು ಶ್ರೀಕ್ಷೇತ್ರದ ಪಾವಿತ್ರ್ಯತೆ ಹಾಳುಗೆಡವಲು ಪ್ರಯತ್ನಿಸುತ್ತಿದ್ದಾರೆ: ಡಾ| ವೀರೇಂದ್ರ ಹೆಗ್ಗಡೆ

    ಧರ್ಮಸ್ಥಳ: ಧರ್ಮಸ್ಥಳದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, “ಸೌಜನ್ಯ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇನೆ. ಆದರೆ, ವಿರೋಧಿಗಳು ಸುಳ್ಳು ಸುದ್ದಿಗಳ ಮೂಲಕ ಕ್ಷೇತ್ರದ ಪಾವಿತ್ರ್ಯವನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ.

    ಇದನ್ನೂ ಓದಿ: ದ್ವೇಷಕ್ಕಾಗಿ ಧರ್ಮಸ್ಥಳದ ಹೆಸರು ದುರ್ಬಳಕೆ: ಡಾ.ವೀರೇಂದ್ರ ಹೆಗ್ಗಡೆ

    ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರುವ ಉದ್ದೇಶದಿಂದ ಮಾಡುತ್ತಿರುವ ಆರೋಪಗಳ ಬಗ್ಗೆ ನನಗೆ ತುಂಬಾ ನೋವಾಗಿದೆ. ನಾನು ಯಾರಿಗೂ ಹೆದರುವುದಿಲ್ಲ. ಆದ್ದರಿಂದ ನನ್ನ ಮನಸ್ಸು ವಿಚಲಿತವಾಗಿಲ್ಲ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಅಂದಿನ ಗೃಹ ಸಚಿವರಿಗೆ ಪತ್ರ ಬರೆದ ಮೊದಲ ವ್ಯಕ್ತಿ ನಾನೇ.

    ಇದನ್ನೂ ಓದಿ: ಸದನದಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪತ್ರ…

    “ಹೊಸ ತನಿಖೆಯನ್ನು ಪ್ರಾರಂಭಿಸಿದರೂ ಇದರಿಂದಾಗಿ ನಾವು ಯಾವುದೇ ತೊಂದರೆಗಳನ್ನು ಎದುರಿಸುವುದಿಲ್ಲ. ಆದರೆ, ಈ ಪ್ರಕರಣಕ್ಕೆ ಕ್ಷೇತ್ರದ ಹೆಸರನ್ನು ಎಳೆದು ತರಲಾಗುತ್ತಿದೆ ಎಂಬುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಮಾಯಕ ಬಾಲಕಿಗೆ ನ್ಯಾಯ ದೊರಕಿಸಿಕೊಡುವುದು ಕ್ಷೇತ್ರದ ಪಾವಿತ್ರ್ಯವನ್ನು ಹಾಳು ಮಾಡುವ ಉದ್ದೇಶವಲ್ಲ ಎಂಬುದು ಸ್ಪಷ್ಟವಾಗಿದೆ. ನಾನು ಮೊದಲಿನಂತೆಯೇ ಗಟ್ಟಿಯಾಗಿಯೇ ಉಳಿದಿದ್ದೇನೆ. ಮುಂಜಾನೆಯಿಂದ ಮುಸ್ಸಂಜೆಯವರೆಗೆ ಹಲವು ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ಷೇತ್ರದ ಪಾವಿತ್ರ್ಯವನ್ನು ಹಾಳು ಮಾಡಲು ಹಲವರು ಯತ್ನಿಸುತ್ತಿರುವುದರ ಹಿಂದಿನ ದ್ವೇಷವೇನೆಂಬುದು ಅರ್ಥವಾಗುತ್ತಿಲ್ಲ” ಎಂದು ಹೆಗ್ಗಡೆ ಹೇಳಿದರು.

    ಇದನ್ನೂ ಓದಿ: ಕೃಷಿ ಇಲ್ಲದೇ ನಮ್ಮೆಲ್ಲರ ಜೀವನ ಸಾಗಲ್ಲ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಡೆ ಹೇಳಿಕೆ

    ಅವರು ಇನ್ನೂ ಹೇಳಿದರು, “ಕ್ಷೇತ್ರದ ವಿರುದ್ಧದ ಪರಿಶೀಲನೆ ಅಭಿಯಾನವು ನನ್ನ ಪರವಾಗಿ ಯಾರದ್ದಾರೆ ಮತ್ತು ನನ್ನ ವಿರುದ್ಧ ದ್ವೇಷವನ್ನು ಕಾರುತ್ತಿದ್ದಾರೆ ಎಂನ್ನುವುದನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡಿದೆ. ನನ್ನ ಬೆಂಬಲಕ್ಕೆ ನಿಂತ ಅನೇಕರು ಇಂತಹ ಸುಳ್ಳು ಆರೋಪಗಳಿಂದಾಗಿ ಕಣ್ಣೀರು ಹಾಕುತ್ತಿದ್ದಾರೆ. ಗುಬ್ಬಚ್ಚಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲು ಯಾವುದೇ ಕಾರಣವಿಲ್ಲ. ನನ್ನ ಆತ್ಮಸಾಕ್ಷಿ ಮತ್ತು ನನ್ನ ವ್ಯವಹಾರಗಳೆರಡೂ ಪಾರದರ್ಶಕವಾಗಿವೆ.

    ಇದನ್ನೂ ಓದಿ: ಜು.13ರಂದು ನಗರದಲ್ಲಿ ಸಿ.ಟಿ ಸ್ಕ್ಯಾನ್ ಘಟಕ ಉದ್ಘಾಟನೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಡೆ ಭಾಗಿ

    ಕ್ಷೇತ್ರ ಆಯೋಜಿಸಿರುವ ಎಲ್ಲಾ ಕಾರ್ಯಕ್ರಮಗಳಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ನಾವು 1.5 ಕೋಟಿಗೂ ಹೆಚ್ಚು ಜನರಿಗೆ ವಿಮೆಯನ್ನು ಒದಗಿಸಿದ್ದೇವೆ ಮತ್ತು 87 ಲಕ್ಷ ಜನರಿಗೆ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ವಿತರಿಸಿದ್ದೇವೆ” ಎಂದು ಹೇಳಿದ್ದಾರೆ. ನಂತರ ಅವರು ತಮ್ಮ ಸಿಬ್ಬಂದಿಗಳಿಗೆ ಶಾಂತವಾಗಿದ್ದು ಶಿಸ್ತು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts