More

    ಕರೊನಾ ಚಿಕಿತ್ಸೆಗೆ 5 ಲಕ್ಷ ರೂ. ಬಿಲ್​, ಅಪೋಲೋ ಆಸ್ಪತ್ರೆ ವಿರುದ್ಧ ಕ್ರಮ; ಡಾ.ಕೆ. ಸುಧಾಕರ್

    ಬೆಂಗಳೂರು: ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್​ ಮತ್ತೊಮ್ಮೆ ಗರಂ ಆಗಿದ್ದಾರೆ.

    ‘ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್‌ ಮಾಡಿದ್ದರೂ ಇಂದು(ಬುಧವಾರ) ಕರೊನಾ ರೋಗಿಗೆ 5 ಲಕ್ಷ ರೂ. ಬಿಲ್‌ ಮಾಡಿದ್ದಾರೆ. ಈ ಸುದ್ದಿ ಕೇಳಿ ಆಘಾತವಾಯಿತು’ ಎಂದು ಸಚಿವರು ಅಸಮಾಧಾನ ಹೊರಹಾಕಿದ್ದಾರೆ.

    ಇದನ್ನೂ ಓದಿರಿ 9 ಲಕ್ಷ ರೂ. ಬಿಲ್ ಕಟ್ಟಿದರಷ್ಟೇ ಮೃತದೇಹ ಕೊಡೋದು… ಶವಕ್ಕಾಗಿ 30 ತಾಸು ಆಸ್ಪತ್ರೆ ಬಾಗಿಲು ಕಾದ ಕುಟುಂಬಸ್ಥರು!

    ‘ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿದೆ. ನಿಗದಿ ಮಾಡಿರುವ ದರಕ್ಕಿಂತಲೂ ರೋಗಿಗಳಿಂದ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂದು(ಬುಧವಾರ) ಆ ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಡಾ. ಸುಧಾಕರ್​ ಎಚ್ಚರಿಸಿದ್ದಾರೆ.

    ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ತನ್ನ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಿಸಲೆಂದು ಸ್ಯಾಂಡಲ್​ವುಡ್​ ನಟಿ ಸುಧಾರಾಣಿ, ಮೊನ್ನೆ(ಸೋಮವಾರ) ರಾತ್ರಿ ಅಪೋಲೋ ಆಸ್ಪತ್ರೆಗೆ ಬಂದಿದ್ದರು. ಬೆಡ್ ​ಇಲ್ಲವೆಂಬ ಸಬೂಬು ಹೇಳಿ ಆಸ್ಪತ್ರೆ ಒಳಗೂ ಸೇರಿಸಿಕೊಳ್ಳದೆ ಸುಧಾರಾಣಿ ಅವರನ್ನು ರಾತ್ರಿಯಿಡೀ ಕಾಯುವಂತೆ ಮಾಡಿದ್ದರು.

    ಈ ಬಗ್ಗೆ ಸುಧಾರಾಣಿ ಅವರೇ ನಿನ್ನೆ(ಮಂಗಳವಾರ) ಅಸಮಾಧಾನ ಹೊರಹಾಕಿದ್ದರು. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಡಾ.ಕೆ. ಸುಧಾಕರ್​, ‘ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದರು. ಇದಾದ ಮರುದಿನವೇ ಕರೊನಾ ರೋಗಿಯೊಬ್ಬರಿಗೆ ಅಪೋಲೋ ಆಸ್ಪತ್ರೆ 5 ಲಕ್ಷ ರೂ. ಬಿಲ್​ ಮಾಡಿದೆ.

    ರಾತ್ರಿಯಿಡೀ ಪರದಾಡಿದ ನಟಿ ಸುಧಾರಾಣಿ, ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ; ಡಾ.ಕೆ. ಸುಧಾಕರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts