More

    ರಾತ್ರಿಯಿಡೀ ಪರದಾಡಿದ ನಟಿ ಸುಧಾರಾಣಿ, ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ; ಡಾ.ಕೆ. ಸುಧಾಕರ್

    ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಸುಧಾರಾಣಿ ಅವರ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಲು ನಿರಾಕರಿಸಿ ಪರದಾಡುವಂತೆ ಮಾಡಿದ್ದ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

    ಈ ಬಗ್ಗೆ ಟ್ವೀಟ್​ ಮಾಡಿರುವ ಡಾ.ಸುಧಾಕರ್​, ‘ನಟಿ ಸುಧಾರಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿರಿ ಗೊರವನಹಳ್ಳಿ ದೇಗುಲ ಸೀಲ್​ಡೌನ್, ವರಮಹಾಲಕ್ಷ್ಮೀ ಹಬ್ಬಕ್ಕೆ ತೆರೆಯುವುದು ಅನುಮಾನ!

    ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಅಣ್ಣನ ಮಗಳನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲು ನಿನ್ನೆ(ಸೋಮವಾರ) ರಾತ್ರಿ ಸುಧಾರಾಣಿ ಹೋಗಿದ್ದರು. ಅವರಿಗೆ ಈ ಆಸ್ಪತ್ರೆಯಲ್ಲೇ ಮೂರ್ನಾಲ್ಕು ವರ್ಷಗಳಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೀಗ ಬೆಡ್​ ಇಲ್ಲವೆಂಬ ಸಬೂಬು ಹೇಳಿ ಚಿಕಿತ್ಸೆ ಕೊಡಲು ಆಸ್ಪತ್ರೆ ಮಂಡಳಿ ನಿರಾಕರಿಸಿದೆ ಎಂದು ಸುಧಾರಾಣಿ ಆಕ್ರೋಶ ಹೊರಹಾಕಿದ್ದರು.

    ಕೊನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‍ಗೆ ಕರೆ ಮಾಡಿ ಸುಧಾರಾಣಿ ಸಹಾಯ ಪಡೆದುಕೊಂಡಿದ್ದರು. ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವೈದ್ಯರಿಗೆ ಕರೆ ಮಾಡಿದ್ದ ಬೆನ್ನಲ್ಲೇ ಬಂದು ವೈದ್ಯರು ಪ್ರಥಮ ಚಿಕಿತ್ಸೆ ಮಾತ್ರ ನೀಡಿದ್ದಾರೆ. ಬಳಿಕ ಅಡ್ಮಿಟ್ ಆಗಲು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಅಣ್ಣನ ಮಗಳನ್ನು ಸುಧಾರಾಣಿ ಕರೆದುಕೊಂಡು ಹೋಗಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಎಚ್ಚೆತ್ತ ವೈದ್ಯಕೀಯ ಸಚಿವರು, ಆ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    ಸುದ್ದಿಗಾಗಿ ಕೊಲೆ ಆರೋಪಿ ಮನೆಗೆ ಬೆಂಕಿ ಹಚ್ಚಿಸಿದ್ದ ವರದಿಗಾರ ಅರೆಸ್ಟ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts