ಚಿಕ್ಕಬಳ್ಳಾಪುರದಲ್ಲಿ ಡಾ.ಕೆ. ಸುಧಾಕರ್​ಗೆ ಭರ್ಜರಿ ಗೆಲುವು; ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಹೆಚ್ಚಿದ ಒತ್ತಾಯ

Sudhakar Eshwar
Published on

ಚಿಕ್ಕಬಳ್ಳಾಪುರ: 18ನೇ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇಂದು (ಜೂನ್​ 04) ಹೊರಬಿದ್ದಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಡಾ.ಕೆ. ಸುಧಾಕರ್​ ಕಾಂಗ್ರೆಸ್​ನ ರಕ್ಷಾ ರಾಮಯ್ಯ ಎದುರು 95,863 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಡಾ.ಕೆ. ಸುಧಾಕರ್ 4,99,570 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್​ನ ರಕ್ಷಾ ರಾಮಯ್ಯ 4,03,707 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಎರಡನೇ ಗೆಲುವು ಸಿಕ್ಕಂತಾಗಿದೆ.

ಇತ್ತ ಸುಧಾಕರ್ ಗೆಲುವಿನ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್​ನ ಪ್ರದೀಪ್​ ಈಶ್ವರ್​ಗೆ ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ. ಈ ಹಿಂದೆ ಚುನಾವಣೆ ಸಮಯದಲ್ಲಿ ಸುಧಾಕರ್‌ ವಿರುದ್ಧ ಸವಾಲೆಸೆದಿದ್ದ ಪ್ರದೀಪ್‌ ಈಶ್ವರ್‌, ಒಂದು ವೋಟ್‌ ಲೀಡ್‌ ಬಂದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಹೀಗಾಗಿ ಇದೀಗ ಸುಧಾಕರ್‌ ಅವರು ಗೆಲುವು ಸಾಧಿಸಿದ್ದು, ಇಂದೇ ಪ್ರದೀಪ್‌ ಈಶ್ವರ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net