

ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಸಮತಾ ಮಹಿಳಾ ಬಳಗದ ಸಹಯೋಗದಲ್ಲಿ ಇಸ್ರೋದ ಮಾಜಿ ಅಧ್ಯಕ್ಷ , ಹಿರಿಯ ಬಾಹ್ಯಾಕಾಶ ವಿಜ್ಞಾನಿ ಡಾ. ಎ. ಎಸ್. ಕಿರಣ್ ಕುಮಾರ್ ಅವರಿಂದ ಇಸ್ರೋದ ಇತಿಹಾಸ, ಸಾಧನೆಗಳು ಹಾಗೂ ಭವಿಷ್ಯದ ದೃಷ್ಟಿಕೋನದ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಜೂ.22ರಂದು ಬೆಳಗ್ಗೆ 9.30ಕ್ಕೆ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ.
ರಾಮಕೃಷ್ಣ ಮಿಷನ್ನ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜಿ ಆಶೀರ್ವಚನ ನೀಡಲಿದ್ದಾರೆ. ಸಮತಾ ಮಹಿಳಾ ಬಳಗದ ಅಧ್ಯಕ್ಷೆ ಕಾತ್ಯಾಯಿನಿ ಭಿಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ಣಾಟಕ ಬ್ಯಾಂಕ್ನ ಜನರಲ್ ಮ್ಯಾನೇಜರ್ ಸುಮನಾ ಘಾಟೆ ಕಾರ್ಯಕ್ರಮ
ಉದ್ಘಾಟಿಸಲಿದ್ದಾರೆ. ನಿವೃತ್ತ ಪ್ರಾಧ್ಯಾಪಕರಾದ ಡಾ. ಎಂ. ಎಂ. ನಾಯಕ್, ಸಮತಾ ಮಹಿಳಾ ಬಳಗದ ಗೌರವಾಧ್ಯಕ್ಷೆ
ವಿಜಯಲಕ್ಷ್ಮಿ ರಾವ್ , ಮಾಜಿ ಎಂಎಲ್ಸಿ ಕ್ಯಾ.ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.