ಬ್ರಿಟನ್​ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕನ್ನಡಿಗರ ಜಯಭೇರಿ, ಡಾ. ಕುಮಾರ್​ ನಾಯ್ಕ್​ಗೆ ಮೊದಲ ಜಯ

ಲಂಡನ್​: ಬ್ರಿಟನ್​ನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕರ್ನಾಟಕ ಮೂಲದ ಇಬ್ಬರು ಭರ್ಜರಿ ಜಯ ದಾಖಲಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೆಂಚಾಪುರ ಗ್ರಾಮದವರಾದ ಡಾ. ಕುಮಾರ್​ ನಾಯ್ಕ್​ ಮೊದಲ ಬಾರಿಗೆ ಜಯ ಗಳಿಸಿದ್ದಾರೆ.

ಬ್ರಿಟನ್​ನಲ್ಲಿ ಮೂಳೆ ತಜ್ಞರಾಗಿರುವ ಡಾ. ಕುಮಾರ ನಾಯ್ಕ್​ ಸ್ವಿಂಡನ್​ ಹೇಡನ್​ ವಿಕ್​ ಕ್ಷೇತ್ರದಲ್ಲಿ ಕನ್ಸರ್ವೇಟಿವ್​ ಪಕ್ಷದಿಂದ ಸ್ಪರ್ಧಿಸಿದ್ದರು. ಲೇಬರ್​ ಪಕ್ಷದ ಸಮೀಪ ಪ್ರತಿಸ್ಪರ್ಧಿಯನ್ನು ಸೋಲಿಸಿ ಗೆಲುವಿನ ರುಚಿ ಕಂಡಿದ್ದಾರೆ.

ಸ್ವಿಂಡನ್​ ವೆಸ್ಟಿಯಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸ್ಪರ್ಧಿಸಿದ್ದ ಸುರೇಶ ಗಟ್ಟಾಪುರ ಕೂಡ ಮತ್ತೊಮ್ಮೆ ಗೆದ್ದು ಸ್ಥಳೀಯ ಆಡಳಿತ ಸಂಸ್ಥೆಯನ್ನು ಪ್ರವೇಶಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *