ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳು
ನಿರ್ಧರಿಸಿದ್ದಾರೆ. ಫೆ.24ರಂದು ಬೆಳಗ್ಗೆ 10.30ಕ್ಕೆ ನಗರದ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ಡಾ.ಎಂ.ಎನ್.ಆರ್. ಅಭಿವಂದನಾ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುವುದು. ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ಅವರು ಡಾ,ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ಉಡುಪಿ ಸಂಸದ ಕೋಟ ನಿವಾಸ ಪೂಜಾರಿ ಇವರು ಅಭಿವಂದನಾ ಭಾಷಣ ಮಾಡಲಿರುವರು.
76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ನೆರವೇರಿಸಲಿದ್ದಾರೆ.
ಶಾಸಕ ಡಿ. ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಡಾ.ಎಂ.ಎನ್.ಆರ್. ಅಭಿವಂದನಾ ಸಮಿತಿಯ ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ
ಭಾಸ್ಕರ.ಎಸ್.ಕೋಟ್ಯಾನ್, ಜೈರಾಜ್.ಬಿ.ರೈ, ಜಯಕರ ಶೆಟಿ ಇಂದ್ರಾಳಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮುಖ್ಯ
ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
ಫೆ.24ರಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮ

You Might Also Like
ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips
ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…
ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…
ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes
grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…