ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮ

mng-feb24-scdcc1
Published on


ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ನಾಡು ಸದಾಶಿವ ರಾಯರು, ಮೊಳಹಳ್ಳಿ ಶಿವರಾಯರು, ಬಂಟ್ವಾಳ ನಾರಾಯಣ ನಾಯಕರಂತಹ ದಿಗ್ಗಜರು ಕಟ್ಟಿ ಬೆಳೆಸಿದ ಸಹಕಾರಿ ಕ್ಷೇತ್ರವನ್ನು ಇಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಉತ್ತುಂಗಕ್ಕೆ ಏರಿಸಿದ್ದಾರೆ. ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ.ಎಂಎನ್‌ಆರ್ ಸಹಕಾರಿ ಕ್ಷೇತ್ರದ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಅತ್ಯಪೂರ್ವ ಕೊಡುಗೆ ನೀಡಿದ್ದಾರೆ ಎಂದು ಉಡುಪಿ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಮಂಗಳವಾರ ನಡೆದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮ, ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮೂರು ದಶಕದಿಂದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಕರಾವಳಿಯ ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬಿರುವ ಡಾ.ಎಂಎನ್‌ಆರ್ ಅವರು ಎಲ್ಲ ವರ್ಗದ, ಎಲ್ಲ ಪಕ್ಷದ ಜನರ ಆದರಾಭಿಮಾನ ಗಳಿಸಿದ್ದಾರೆ. ಜಿಲ್ಲೆಯ ರೈತರು ಹಾಗು ಮಹಿಳೆಯರ ಬಾಳಿಗೆ ಬೆಳಕಾಗಿದ್ದಾರೆ. ನೂರಕ್ಕೂ ಅಧಿಕ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖೆಗಳನ್ನು ತೆರೆದು ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಿದ್ದಾರೆ. ದೇಶದಲ್ಲೇ ಅತೀ ಹೆಚ್ಚು ಕಿಸಾನ್ ಕಾರ್ಡ್ ವಿತರಿಸಿದ ಹೆಗ್ಗಳಿಕೆಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಹೊಂದಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ ಎಂದು ಕೋಟ ಶ್ಲಾಘಿಸಿದರು.
* ಆದರ್ಶಪ್ರಾಯರು :
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಮಾತನಾಡಿ ‘ ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ.ಎಂಎನ್‌ಆರ್ ಅವರು ಸಹಕಾರಿಗಳೆಲ್ಲರಿಗೂ
ಆದರ್ಶಪ್ರಾಯರಾಗಿದ್ದಾರೆ. ಗ್ರಾಮೀಣಾಭಿವೃದ್ಧಿಯ ಜತೆಗೆ ಜಿಲ್ಲೆಯ ಧಾರ್ಮಿಕ, ಸಾಮಾಜಿಕ ಹಾಗೂ ಉದ್ಯಮ ಕ್ಷೇತ್ರದ ಬೆಳವಣಿಗೆಗೂ ಗಣನೀಯ ಕೊಡುಗೆ ನೀಡಿರುವ ಡಾ.ಎಂಎನ್‌ಆರ್ ಅಜಾತ ಶತ್ರುವಾಗಿ ಬೆಳೆದು ನಿಂತಿದ್ದಾರೆ ಎಂದರು.
ಶಾಸಕರಾದ ಯಶಪಾಲ್ ಸುವರ್ಣ, ಡಾ.ವೈ.ಭರತ್ ಶೆಟ್ಟಿ, ಕಣಚೂರು ಸಮೂಹ ಸಂಸ್ಥೆಯ ಸ್ಥಾಪಕ ಚೇರ್ಮನ್
ಡಾ.ಯು.ಕೆ.ಮೋನು ಶುಭ ಹಾರೈಸಿದರು.
* ಪೊಲೀಸ್ ಆಯುಕ್ತರಿಗೆ ಸನ್ಮಾನ :
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣವನ್ನು ಕ್ಷಿಪ್ರಗತಿಯಲ್ಲಿ ಬೇಧಿಸಿ ದರೋಡೆಕೋರರನ್ನು ಬಂಧಿಸಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹಾಗೂ ಹಿರಿಯ ಅಧಿಕಾರಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಇಂತಹ ಘಟನೆ ಇನ್ನು ಮರುಕಳಿಸಬಾರದು. ಸಹಕಾರಿ ಸಂಘಗಳು ಅತ್ಯಾಧುನಿಕ ಭದ್ರತಾ ಸೌಲಭ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅನುಪಮ್ ಅಗರವಾಲ್ ತಿಳಿಸಿದರು.
ಗೌರವಾರ್ಪಣೆ :
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅವಿಭಜಿತ ದ.ಕ.ಜಿಲ್ಲೆಯ ಸಹಕಾರಿಗಳ ಪರವಾಗಿ ಸನ್ಮಾನಿಸಲಾಯಿತು. ಅವರ 76ನೇ ಹುಟ್ಟುಹಬ್ಬದ ಅಂಗವಾಗಿ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ
ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ಶಶಿಕುಮಾರ್ ರೈ ಬಾಲ್ಯೊಟ್ಟು,
ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ ಭಟ್,
ಭಾಸ್ಕರ.ಎಸ್.ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ, ಎಸ್. ರಾಜು ಪೂಜಾರಿ , ಎಸ್. ಬಿ. ಜಯರಾಮ ರೈ, ಎಂ.ಮಹೇಶ್ ಹೆಗ್ಡೆ,
, ಮೋನಪ್ಪ ಶೆಟ್ಟಿ ಎಕ್ಕಾರು, ಬಿ.ಅಶೋಕ್ ಕುಮಾರ್ ಶೆಟ್ಟಿ, ಜೈರಾಜ್.ಬಿ.ರೈ, ಪಿ. ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಎಸ್.ಎನ್.ಮನ್ಮಥ, ಕುಶಾಲಪ್ಪ ಗೌಡ ಪಿ., ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ , ಉದ್ಯಮಿ ಮೇಘರಾಜ್ ಜೈನ್, ಕ್ಷಮಾ ಮೇಘರಾಜ್ ಉಪಸ್ಥಿತರಿದ್ದರು. ಡಾ.ಎಂ.ಎನ್.ಆರ್. ಅಭಿವಂದನಾ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ರಾಜೇಶ್.ಕೆ.ಸಿ.
ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net