ಹಿರಿಯ ಪತ್ರಕರ್ತೆ ಡಾ. ಪೂರ್ಣಿಮಾಗೆ 'ಗೌರಿಸುಂದರ್' ಪ್ರಶಸ್ತಿ

award
Published on

ಬೆಂಗಳೂರು: ಶ್ರೀ ಗೌರಿ ಸುಂದರ್ ಪ್ರಶಸ್ತಿ ಸಮಿತಿ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ‘ಗೌರಿಸುಂದರ್ ವಾರ್ಷಿಕ ಪ್ರಶಸ್ತಿ’ಗೆ ಪ್ರಕಾಶಕಿ ಹಾಗೂ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಕಾಶಕರಿಗೆ ನೀಡುವ ಈ ಪ್ರಶಸ್ತಿಯು 10 ಸಾವಿರ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ೆ.5ರಂದು ನಗರದ ಬಸವನಗುಡಿಯ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಇಂದಿರಾ ಸುಂದರ್ ತಿಳಿಸಿದ್ದಾರೆ.
ಸಮಿತಿಯ ಗೌರವ ಅಧ್ಯಕ್ಷರಾದ ಕವಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಹಾಗೂ ಕಾರ್ಯದರ್ಶಿ ಇಂದಿರಾ ಸುಂದರ್ ಅವರು ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆರ್. ಪೂರ್ಣಿಮಾ ಅವರನ್ನು ಆಯ್ಕೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net