ಜೈನ್ ಮಿಲನ್‌ನಿಂದ ಡಾ.ಪ್ರಭಾಚಂದ್ರ ಜೈನ್ ಅಭಿನಂದನೆ

03
Published on

ಬಂಟ್ವಾಳ: ಬಂಟ್ವಾಳ ಜೈನ್ ಮಿಲನ್, ಮೂಡುಬಿದಿರೆ ಜೈನ್ ಮಿಲನ್ ಮಾಸಿಕ ಸಭೆ ಹಾಗೂ ಡಾ.ಪ್ರಭಾ ಚಂದ್ರ ಜೈನ್ ಅಭಿನಂದನಾ ಕಾರ್ಯಕ್ರಮ ಭಾನುವಾರ ಸಿದ್ದಕಟ್ಟೆ ನಲ್ಲೂರಂಗಡಿ ಬಸದಿಯ ಸ್ವಸ್ತಿಕ್ ಸಭಾಭವನದಲ್ಲಿ ನಡೆಯಿತು.

ಬಂಟ್ವಾಳದ ಜೈನ್ ಮಿಲನ್ ಅಧ್ಯಕ್ಷ ಮಧ್ವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ನಾಲ್ಕೂವರೆ ದಶಕಗಳಿಂದ ಸಿದ್ದಕಟ್ಟೆಯಲ್ಲಿ ಜನಪ್ರಿಯ ವೈದ್ಯರಾಗಿರುವ ಪ್ರಭಾಚಂದ್ರ ಜೈನ್ ಅವರನ್ನು ಉಭಯ ಜೈನ್ ಮಿಲನ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ಸನ್ಮಾನಿಸಿದರು.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮಾತನಾಡಿದರು. ಭಾರತೀಯ ಜೈನ್ ಮಿಲನ್ ವಲಯ 8ರ ಉಪಾಧ್ಯಕ್ಷ ಸುದರ್ಶನ್ ಜೈನ್, ಮೂಡಬಿದಿರೆಯ ನಿವೃತ್ತ ಕನ್ನಡ ಅಧ್ಯಾಪಕ ಶ್ರೀಧರ್ ಜೈನ್ ಅಭಿನಂದನಾ ಭಾಷಣ ಮಾಡಿದರು. ಡಾ.ಸುದೀಪ್ ಸಿದ್ದಕಟ್ಟೆ ಸನ್ಮಾನ ಪತ್ರ ವಾಚಿಸಿದರು. ರಶ್ಮಿತಾ ಯುವರಾಜ್ ಜೈನ್ ಅನಿಸಿಕೆ ವ್ಯಕ್ತಪಡಿಸಿದರು. ಸುಭಾಶ್ಚಂದ್ರ ಜೈನ್, ಜಯರಾಜ ಕಂಬಳಿ, ರಾಜೇಶ್ ಕುಮಾರ್, ಪುಷ್ಪರಾಜ್, ಶ್ವೇತಾ ಜೈನ್, ಶಶಿಕಲಾ, ಗೀತಾ ಜಿನ ಚಂದ್ರ ಉಪಸ್ಥಿತರಿದ್ದರು. ಸಿದ್ದಕಟ್ಟೆ ಶ್ರೀ ಅನಂತಪದ್ಮ ಮಹಿಳಾ ಸಂಘ, ಸ್ವಸ್ತಿಕ್ ಯುವಜನ ಸಂಘ, ಮೂಡಬಿದಿರೆ ಸರ್ವ ಮಂಗಳ ಮಹಿಳಾ ಸಂಘ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು. ಉದಯ್ ಕುಮಾರ್ ಜೈನ್ ಸ್ವಾಗತಿಸಿದರು. ನಿರಂಜನ್ ಕುಮಾರ್ ವಂದಿಸಿದರು. ಭರತ್‌ಕುಮಾರ್, ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net