More

    ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಡಾ. ರವೀಂದ್ರನಾಥ್​ ನೇಮಕ

    ಬೆಂಗಳೂರು: ಜಯದೇವ ಹೃದ್ರೋಗ  ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್​ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

    ಡಾ.ಸಿ.ಎನ್. ಮಂಜುನಾಥ್ ಅವರು ಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ನಿವೃತ್ತಿ ಹೊಂದಿದ ಬೆನ್ನಲ್ಲಿಯೇ ಈ ಸ್ಥಾನಕ್ಕೆ ಪ್ರಭಾರ ನಿರ್ದೇಶಕರನ್ನಾಗಿ ಡಾ. ರವಿಂದ್ರನಾಥ್ ಅವರನ್ನು ಆಯ್ಕೆ ಮಾಡಿದೆ.

    jayadeva Hospital

    ಇದನ್ನೂ ಓದಿ: ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಸೋನು ಪಾಟೀಲ್​

    69 ವಯಸ್ಸಾಗಿರುವ ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಕುಲಪತಿಯಾಗಿ ಕಾರ್ಯ ನಿರ್ವಹಿಸಿದ್ಧಾರೆ.

    ಡಾ. ಮಂಜುನಾಥ್​ ಅವರ ನಿವೃತ್ತಿ ಹಿನ್ನಲೆಯಲ್ಲಿ ಜಯದೇವ ಆಸ್ಪತ್ರೆ ಸಿಬ್ಬಂದಿ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿದ್ದರು. ಈ ವಿಶೇಷ ಕಾರ್ಯಕ್ರಮದಲ್ಲಿ ನೂರಾರು ಸಿಬ್ಬಂದಿ ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಆರತಿ ಬೆಳಗಿ ಗೌರವಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts