More

    ಎಸ್​.ಎಲ್​.ಭೈರಪ್ಪ, ಸುಧಾಮೂರ್ತಿ ಅವರಿಂದ ಪದ್ಮಭೂಷಣ ಪುರಸ್ಕಾರ ಸ್ವೀಕಾರ: ರಾಷ್ಟ್ರಪತಿಯಿಂದ ಪ್ರಶಸ್ತಿ ಪ್ರದಾನ

    ನವದೆಹಲಿ: ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಡಾ.ಎಸ್​.ಎಲ್. ಭೈರಪ್ಪ, ಮೂರ್ತಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ಡಾ.ಖಾದರ್, ಸಂಗೀತ ಸಂಯೋಜಕ ಎಂ.ಎಂ.ಕೀರವಾಣಿ ಸೇರಿದಂತೆ ಹಲವರಿಗೆ ಇಂದು ಪದ್ಮಪ್ರಶಸ್ತಿಗಳನ್ನು ನೀಡಲಾಯಿತು.

    ಪ್ರಸಕ್ತ ಸಾಲಿನ ಪದ್ಮಪ್ರಶಸ್ತಿಗಳನ್ನು ಜನವರಿಯಲ್ಲಿ ಘೋಷಿಸಲಾಗಿದ್ದು, ಈಗಾಗಲೇ ಮಾಜಿ ಸಿಎಂ ಎಸ್​.ಎಂ.ಕೃಷ್ಣ ಸೇರಿದಂತೆ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಉಳಿದ ಕೆಲವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.

    ಇದನ್ನೂ ಓದಿ: ಎಸ್‌ಎಂ ಕೃಷ್ಣ, ಎಸ್‌ಎಲ್ ಭೈರಪ್ಪ, ಸುಧಾಮೂರ್ತಿ ಸೇರಿದಂತೆ 8 ಕನ್ನಡಿಗರಿಗೆ ಪದ್ಮ ಪುರಸ್ಕಾರ ಪ್ರಕಟ

    ಎಸ್​.ಎಲ್. ಭೈರಪ್ಪ, ಸುಧಾಮೂರ್ತಿ ಅವರು ಇಂದು ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದರು. ಹಾಗೆಯೇ ‘ಮಿಲೆಟ್ ಮ್ಯಾನ್ ಆಫ್ ಇಂಡಿಯಾ’ ಎಂದೇ ಹೆಸರಾಗಿರುವ ಡಾ.ಖಾದರ್, ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು’ ಗೀತೆ ಖ್ಯಾತಿಯ ಎಂ.ಎಂ.ಕೀರವಾಣಿ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರೊಂದಿಗೆ ದೇಶದ ವಿವಿಧೆಡೆಯ ಇನ್ನೂ ಕೆಲವು ಸಾಧಕರು ಕೂಡ ಪದ್ಮಪ್ರಶಸ್ತಿ ಸ್ವೀಕರಿಸಿದರು.

    ಇದನ್ನೂ ಓದಿ: ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಎಸ್​.ಎಂ.ಕೃಷ್ಣ; ದೆಹಲಿಯಲ್ಲಿ ರಾಷ್ಟ್ರಪತಿಯಿಂದ ಪ್ರದಾನ

    ದೇಶದಲ್ಲಿ ಈ ಸಲ ಒಟ್ಟು 106 ಮಂದಿಯನ್ನು ಪದ್ಮಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆ ಪೈಕಿ 6 ಸಾಧಕರನ್ನು ಪದ್ಮವಿಭೂಷಣ, 9 ಸಾಧಕರನ್ನು ಪದ್ಮಭೂಷಣ ಮತ್ತು 91 ಸಾಧಕರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

    ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿಗೆ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts